ಮುಲ್ಕಿ: ಕೆಮ್ರಾಲ್ ಗ್ರಾಮ ಪಂಚಾಯಿತಿಯ 2024-25ನೇ ಸಾಲಿನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಗೂ15ನೇ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆ ಗ್ರಾಮ ಸಭೆಯು ಪಂಚಾಯತ್ ಸಭಾಭವನದಲ್ಲಿ ನಡೆಯಿತು.
ಸಭೆ ಅಧ್ಯಕ್ಷತೆ ವಹಿಸಿ ಪಂಚಾಯತ್ ಅಧ್ಯಕ್ಷ ಮಯ್ಯದಿ ಮಾತನಾಡಿ, ಪಂಚಾಯತ್ ಆಡಳಿತವು ಸರ್ಕಾರದ ಸವಲತ್ತುಗಳನ್ನು ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ನೀಡಲು ಪ್ರಯತ್ನಿಸುತ್ತಿದೆ ಎಂದರು.
ಸಭೆಯ ನೋಡೆಲ್ ಅಧಿಕಾರಿಯಾಗಿ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರಾದ ವೀಣಾ ಕೆ.ಆರ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರು, ಸರ್ವಸದಸ್ಯರು, ಇಂಜಿನಿಯರ್ ಪ್ರಶಾಂತ್ ಆಳ್ವ, ತಾಲೂಕು ಸಂಯೋಜಕಿ ಧನಲಕ್ಷೀ, ಎನ್ಐಆರ್ ಡಿಪಿಆರ್ ನ ಸಂದೀಪ್ ಚಂದ್ರನ್, ತಾಂತ್ರಿಕ ಸಂಯೋಜಕರಾದ ರುತೇಶ್ , ಗ್ರಾಮ ಸಂಪನ್ಮೂಲ ವ್ಯಕ್ತಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅರುಣ್ ಪ್ರದೀಪ್ ಡಿ ಸೋಜ, ಕಾರ್ಯದರ್ಶಿ, ಎಸ್ ಡಿ ಎ ಮತ್ತು ಸಿಬ್ಬಂದಿ ವರ್ಗ, ಆಶಾ ಕಾರ್ಯಕರ್ತರು, ಸಂಜೀವಿನಿ ಒಕ್ಕೂಟದ ಎಂಬಿಕೆ, ಎಲ್ ಸಿ ಆರ್ ಪಿ, ಪಶುಸಖಿ, ಕೃಷಿಸಖಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
Kshetra Samachara
18/12/2024 09:52 pm