ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ: ಮಾರು ವೇಷದಲ್ಲಿ ಕಾರ್ಯಚರಣೆಗೆ ಬಂದ ಸಿಐಡಿ ಅಧಿಕಾರಿಗಳು - ತಪ್ಪು ಗ್ರಹಿಕೆಯಿಂದ ಪೊಲೀಸರೊಂದಿಗೆ ಸ್ಥಳೀಯರ ತಲ್ಲಾಟ

ಬೈಂದೂರು: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪದ ಕೋಡಿ ಸಮುದ್ರ ತೀರದಲ್ಲಿ ಅಂಬರ್ ಗ್ರೀಸ್ ಮಾರಾಟದ ಬಗ್ಗೆ (ತಿಮಿಂಗಿಲ ವಾಂತಿ) ಖಚಿತ ಮಾಹಿತಿ ಮೇರೆಗೆ ಶೋಧ ಕಾರ್ಯಾಚರಣೆಗೆ ಮಾರುವೇಷದಲ್ಲಿ ಬಂದ ಸಿಐಡಿ ಅಧಿಕಾರಿಗಳ ಬಗ್ಗೆ ಸ್ಥಳೀಯರು ತಪ್ಪು ಗ್ರಹಿಕೆಯಿಂದ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಡಿಸೆಂಬರ್‌ 18 ರಂದು ಬುಧವಾರ ಕುಂದಾಪುರ M ಕೋಡಿಯಲ್ಲಿ ಸಂಭವಿಸಿದೆ.

ಕೋಡಿಯಲ್ಲಿ ಅಂಬರ್ ಗ್ರೀಸ್ ಡೀಲ್ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮಾರುವೇಷದಲ್ಲಿ ಮೂರು ಕಾರಿನಲ್ಲಿ ಬಂದ ಅರಣ್ಯ ಇಲಾಖೆ ಸಿಐಡಿ ಅಧಿಕಾರಿಗಳು ಶೋಧ ಕಾರ್ಯಾಚರಣೆಯಲ್ಲಿ ನಾಲ್ವರನ್ನು ಕಾರಿಗೆ ತುಂಬುವ ವೇಳೆ ಸ್ಥಳೀಯರ ತಪ್ಪು ಗ್ರಹಿಕೆಯಿಂದ ಅಧಿಕಾರಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿರುತ್ತಾರೆ. ಅಲ್ಲದೆ ಆ ವೇಳೆ ಸುತ್ತಮುತ್ತಲಿನ ಜನ ಸೇರಿದ್ದರಿಂದ ತಳ್ಳಾಟ ನಡೆದಿರುತ್ತದೆ ಎಂಬ ವರದಿ ಲಭ್ಯವಾಗುತ್ತಿದೆ.

ಇದರಿಂದ ತಲ್ಲಾಟಕ್ಕೆ ಒಳಗಾದ ಅಧಿಕಾರಿಗಳು ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿರುತ್ತಾರೆ.ಈ ಅಧಿಕಾರಿಗಳು ಮಾರುವೇಷದಲ್ಲಿ ಬಂದ ವಿಚಾರ ಸ್ಥಳೀಯ ಪೊಲೀಸರಿಗೆ ಮಾಹಿತಿ ಇಲ್ಲ ಎಂದು ತಿಳಿಯಲಾಗಿದೆ.

ಘಟನೆಯ ವಿವರ : ಸುಮಾರು ಆರು ತಿಂಗಳ ಹಿಂದೆ ಕೋಟ ಮಣೂರಿನಲ್ಲಿ CID ಸೋಗಿನಲ್ಲಿ ದರೋಡೆಕೋರರು ಬಂದು ಮನೆ ದರೋಡೆಗೆ ವಿಫಲ ಪ್ರಯತ್ನ ಮಾಡಿದ್ದರು. CC ಕ್ಯಾಮರಾ ಮೂಲಕ ದರೋಡೆ ಯತ್ನದ ದೃಶ್ಯ ಸೆರೆಯಾಗಿತ್ತು. ಈ ಘಟನೆ ನೆನಪಿಸಿಕೊಂಡ ಜನರು ಇದು ಕೂಡ ಅಂತಹದೆ ಮತ್ತೊಂದು ದರೋಡೆ ಯತ್ನ ಎಂದು ತಪ್ಪು ತಿಳಿದು ಅಧಿಕಾರಿಗಳ ಜೊತೆಗೆ ಘರ್ಷಣೆಗೆ ಇಳಿದಿದ್ದರು. ಆದರೆ ಇನ್ನೊಂದು ಮೂಲದ ಪ್ರಕಾರ ಅಂಬರ್ ಗ್ರೀಸ್ ವ್ಯವಹಾರ ಸತ್ಯವಾಗಿದ್ದು ಸದ್ಯದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎನ್ನುವ ಮಾಹಿತಿ ಕೇಳಿ ಬರುತ್ತಿದೆ.

ತಕ್ಷಣ ಸ್ಥಳಕ್ಕಾಗಮಿಸಿದ ಹಿರಿಯ ಪೊಲೀಸ್ ಅಧಿಕಾರಿಗಳಾದ ಡಿವೈಎಸ್ಪಿ ಬೆಳ್ಳಿಯಪ್ಪ, ಕುಂದಾಪುರ ಟೌನ್ ಎಸ್ಐ ನಂಜ ನಾಯ್ಕ ಹಾಗೂ ಸಿಬ್ಬಂದಿಗಳು ಸಿಐಡಿ ಅಧಿಕಾರಿಗಳನ್ನು ಸ್ಥಳಾಂತರಿಸಿದರು ಎಂದು ಮಾಹಿತಿ ತಿಳಿದು ಬಂದಿದೆ.

Edited By : PublicNext Desk
Kshetra Samachara

Kshetra Samachara

19/12/2024 09:00 am

Cinque Terre

1.41 K

Cinque Terre

0

ಸಂಬಂಧಿತ ಸುದ್ದಿ