ಮುಂಬೈ ಕರಾವಳಿಯಲ್ಲಿ ಬುಧವಾರದಂದು ದೋಣಿಯೊಂದಕ್ಕೆ ಸ್ಪೀಡ್‌ಬೋಟ್ ಅಪ್ಪಳಿಸಿದ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿದೆ. ದೋಣಿಗೆ ಡಿಕ್ಕಿ ಹೊಡೆಯುವ ಮೊದಲು ಸ್ಪೀಡ್ ಬೋಟ್ ಯು-ಟರ್ನ್ ತೆಗೆದುಕೊಳ್ಳುವುದನ್ನು ಕಾಣಬಹುದು.
ಮುಂಬೈನ ಗೇಟ್‌ವೇ ಆಫ್ ಇಂಡಿಯಾ ಸಮೀಪ ಪ್ರಯಾಣಿಕರಿದ್ದ ದೋಣಿಗೆ ಸ್ಪೀಡ್‌ಬೋಟ್ ಡಿಕ್ಕಿ ಹೊಡೆದು 13 ಮಂದಿ ಮೃತಪಟ್ಟಿದ್ದು, 101 ಮಂದಿಯನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತರಲ್ಲಿ ಮೂವರು ನೌಕಾಪಡೆ ಸಿಬ್ಬಂದಿ, 10 ಮಂದಿ ಪ್ರಯಾಣಿಕರು ಸೇರಿದ್ದಾರೆ.
100ಕ್ಕೂ ಹೆಚ್ಚು ಪ್ರವಾಸಿಗರು ಮತ್ತು ಐವರು ಸಿಬ್ಬಂದಿಯಿದ್ದ ನೀಲಕಮಲ್ ದೋಣಿ ಮುಂಬೈ ಬಳಿಯ ಜನಪ್ರಿಯ ಪ್ರವಾಸಿ ತಾಣವಾದ ಎಲಿಫೆಂಟಾ ದ್ವೀಪಗಳಿಗೆ ತೆರಳುತ್ತಿದ್ದಾಗ ಸ್ಪೀಡ್ ಬೋಟ್ ಡಿಕ್ಕಿಯಾಗಿದೆ. ಅಪಘಾತದ ದೃಶ್ಯ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
PublicNext
19/12/2024 09:34 am