ಸೋಮವಾರಪೇಟೆ: ಸಿ ಆ್ಯಂಡ್ ಡಿ ಭೂಮಿಯನ್ನು ಅರಣ್ಯ ಎಂದು ಘೋಷಣೆ ಮಾಡಬಾರದು, ರೈತರಿಗೆ ಭೂಮಿಯ ಹಕ್ಕುಪತ್ರವನ್ನು ನೀಡಬೇಕೆಂದು ಆಗ್ರಹಿಸಿ ನಾಳೆ ಮಡಿಕೇರಿ ಗಾಂಧಿ ಮೈದಾನದಲ್ಲಿ ರೈತರ ಬೃಹತ್ ಪ್ರತಿಭಟನಾ ಧರಣಿ ನಡೆಯಲಿದೆ ಎಂದು ರೈತ ಹೋರಾಟ ಸಮಿತಿ ಅಧ್ಯಕ್ಷ ಚಕ್ರವರ್ತಿ ಸುರೇಶ್ ಹೇಳಿದರು. ಹೋರಾಟಕ್ಕೆ ರೈತ ಸಂಘ, ಜಿಲ್ಲೆಯ ೫೦ ರಷ್ಟು ಸಂಘಸAಸ್ಥೆಗಳು, ಗ್ರಾಮಾಭಿವೃದ್ಧಿ ಮಂಡಳಿಗಳು, ಎಲ್ಲಾ ರಾಜಕೀಯ ಪಕ್ಷಗಳು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿವೆ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಬೆಳಗಾವಿ ಅಧಿವೇಶನದಲ್ಲಿ ಜಿಲ್ಲೆಯ ಇಬ್ಬರು ಶಾಸಕರುಗಳಾದ ಡಾ.ಮಂತರ್‌ಗೌಡ ಹಾಗು ಎ.ಎಸ್.ಪೊನ್ನಣ್ಣ, ಸಿ ಆ್ಯಂಡ್ ಡಿ ಭೂಮಿ ರೈತರಿಗೆ ಸಿಗಬೇಕು ಎಂದು ತಮ್ಮ ವಾದ ಮಂಡಿಸಿದ್ದಾರೆ. ಅವರಿಗೆ ಜಿಲ್ಲೆಯ ರೈತರು ಚಿರರುಣಿಗಳಾಗಿರುತ್ತೇವೆ. ಶಾಶ್ವತ ಪರಿಹಾರ ಸಿಗುವ ತನಕ, ರೈತರ ಹೋರಾಟಕ್ಕೆ ತಮ್ಮ ಸಹಕಾರ ನೀಡಬೇಕು ಎಂದು ಹೇಳಿದರು.
Kshetra Samachara
19/12/2024 10:03 am