ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಡ್ಯ: ಸಾಹಿತ್ಯ ಸಮ್ಮೇಳನ - ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ಎರಡು ದಿನ ರಜೆ ಘೋಷಣೆ

ಮಂಡ್ಯ: ಜಿಲ್ಲೆಯಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿದ್ಧತೆಗಳು ಅಂತಿಮ ಹಂತಕ್ಕೆ ತಲುಪಿದ್ದು, ಡಿಸೆಂಬರ್ 20 ರಿಂದ 22 ರವರೆಗೆ ಮಂಡ್ಯ ನಗರದ ಬೆಂಗಳೂರು - ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ರಸ್ತೆ ಬಳಿಯ ಅಮರಾವತಿ ಹೋಟೆಲ್ ಹಾಗೂ ಸ್ಯಾಂಟೋ ಆಸ್ಪತ್ರೆ ಹಿಂಭಾಗದ ಸ್ಥಳದಲ್ಲಿ ನಡೆಯಲಿದ್ದು ವೇದಿಕೆ ನಿರ್ಮಾಣ ಪೂರ್ಣಗೊಂಡಿದೆ.

ಸಮ್ಮೇಳನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌, ಸಚಿವ ಸಂಪುಟದ ಸಚಿವರು, ನ್ಯಾಯಾಧೀಶರು ಹಾಗೂ ಗಣ್ಯ ವ್ಯಕ್ತಿಗಳು ಆಗಮಿಸಲಿದ್ದು, ಶ್ವಾನದಳದಿಂದ ತಪಾಸಣೆ ಮತ್ತು ಬಿಗಿ ಬಂದೋಬಸ್ತ್ ನಡೆದಿದೆ. ಗಣ್ಯ ವ್ಯಕ್ತಿಗಳಿಗೆ ಮತ್ತು ನೋಂದಾಯಿತ ಪ್ರತಿನಿಧಿಗಳಿಗೆ ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿದೆ.

ಜಿಲ್ಲೆಯ ಸಮಸ್ತ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸಮ್ಮೇಳನ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಜಿಲ್ಲಾಧಿಕಾರಿ ಕುಮಾರ ಆದೇಶ ಹೊರಡಿಸಿದ್ದಾರೆ. ಡಿಸೆಂಬರ್ 20 ಮತ್ತು 21 ರಂದು ಜಿಲ್ಲೆಯ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.

Edited By : Ashok M
PublicNext

PublicNext

19/12/2024 10:15 am

Cinque Terre

16.2 K

Cinque Terre

0

ಸಂಬಂಧಿತ ಸುದ್ದಿ