ಸಕಲೇಶಪುರ : ಅನಧಿಕೃತವಾಗಿ ಕೆಇಬಿ ಟ್ರಾನ್ಸ್‌ಫಾರ್ಮರ್ ಕಂಬ ಏರಿ ವಿದ್ಯುತ್ ಶಾಕ್‌ನಿಂದ ಬೆಂಕಿ ಹೊತ್ತಿಕೊಂಡು ವ್ಯಕ್ತಿಯೊಬ್ಬ ನರಳಾಡಿದ ಘಟನೆ ಸಕಲೇಶಪುರ ತಾಲ್ಲೂಕಿನ ಹೆನ್ನಲಿ ಗ್ರಾಮದ ಬಳಿ ನಡೆದಿದೆ.
ಹೆನ್ನಲಿ ಗ್ರಾಮದ ಲಕ್ಷ್ಮಣ್ (40) ತೀವ್ರವಾಗಿ ಗಾಯಗೊಂಡ ವ್ಯಕ್ತಿಯಾಗಿದ್ದಾರೆ. ವಿದ್ಯುತ್ ಶಾಕ್‌ನಿಂದ ಟ್ರಾನ್ಸ್‌ಫರ್ಮರ್ ಪೆಟ್ಟಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ, ಸುದ್ದಿ ತಿಳಿದು ಕೆಇಬಿ ಸಿಬ್ಬಂದಿ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಿದ್ದಾರೆ. ಟ್ರಾನ್ಸ್‌ಫಾರ್ಮರ್‌ನಲ್ಲಿ ಕಾಣಿಸಿಕೊಂಡ ಬೆಂಕಿಯಿಂದಾಗಿ ಕಂಬದಲ್ಲಿಯೇ ಲಕ್ಷ್ಮಣ್ ಸಿಲುಕಿ ತೀವ್ರವಾಗಿ ಗಾಯಗೊಂಡಿದ್ದಾರೆ.
ಗಾಯಾಳುವಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಸಕಲೇಶಪುರ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
PublicNext
19/12/2024 11:16 am