ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುರತ್ಕಲ್: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ, ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

ಸುರತ್ಕಲ್: ತಡಂಬೈಲ್ ವೆಂಕಟರಮಣ ಕಾಲನಿಯಲ್ಲಿ ಮಧ್ಯಾಹ್ನ ಅಡುಗೆ ಮನೆಯ ಸಿಲಿಂಡರ್‌ನಿಂದ ಗ್ಯಾಸ್‌ ಸೋರಿಕೆಯಾಗಿ ಬೆಂಕಿ ಹತ್ತಿಕೊಂಡು ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮನೆಯ ಯಜಮಾನ ವಾಮನ ಅವರ ಪತ್ನಿ ವಸಂತಿ (68) ಮತ್ತು ವಾಮನ ಅವರ ಅಕ್ಕ ಪುಷ್ಪಾ (72) ಎಂದು ಗುರುತಿಸಲಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

`ಗ್ಯಾಸ್ ಸೋರಿಕೆಯಾಗಿರುವುದು ಗಮನಕ್ಕೆ ಬಾರದೆ ವಸಂತಿ ಮಧ್ಯಾಹ್ನ ಅಡುಗೆ ಕೋಣೆಗೆ ಹೋಗಿ ಸ್ಟೌವ್‌ಗೆ ಬೆಂಕಿ ಹಚ್ಚುತ್ತಿದ್ದಂತೆ ಏಕಾಏಕಿ ಬೆಂಕಿ ವ್ಯಾಪಿಸಿಕೊಂಡಿತು. ಅವರು ಸಹಾಯಕ್ಕಾಗಿ ಕೂಗಿದಾಗ ಹೊರಗೆ ಬಟ್ಟೆ ಒಗೆಯುತ್ತಿದ್ದ ಪುಷ್ಪಾ ಧಾವಿಸಿ ಬಂದು ಹೊರಗಿನಿಂದ ಬಾಗಿಲು ತೆರೆಯುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆ ಅವರಿಗೂ ಚಾಚಿತು. ಅವರಿಬ್ಬರ ಕಿರುಚಾಟ ಕೇಳಿ ಅಕ್ಕಪಕ್ಕದವರು ಧಾವಿಸಿ ಇಬ್ಬರನ್ನೂ ಹೊರಗೆಳೆದು ಬೆಂಕಿ ನಂದಿಸಲು ಸಹಾಯ ಮಾಡಿದರು. ವಸಂತಿ ಧರಿಸಿದ್ದ ಸೀರೆ ಅವರ ಮೈಗೆ ಅಂಟಿಕೊಂಡಿತ್ತು. ಬಳಿಕ ಸೀರೆಯನ್ನು ಕತ್ತರಿಸಿ ತೆಗೆಯಬೇಕಾಯಿತು. ಅದಾಗಲೇ ಕೈ, ಮುಖದ ಭಾಗ ಮತ್ತಿತರ ಕಡೆ ಬೆಂಕಿ ತಗಲಿತ್ತು ಎಂದು ನೆರವಿಗೆ ಧಾವಿಸಿದವರು ತಿಳಿಸಿದ್ದಾರೆ.

ದುರಂತದಲ್ಲಿ ಮನೆಯ ಛಾವಣಿಯ ಶೀಟ್' ಹಾರಿಹೋಗಿ ಸ್ಫೋಟದಂತಹ ಶಬ್ಧ ಕೇಳಿಸಿದೆ. ಮನೆಯ ಹೊರಭಾಗಕ್ಕೂ ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿತ್ತು. ಮನೆಯ ಒಳಭಾಗ, ಹೊರಗೆ ಇದ್ದ ಚಪ್ಪಲಿ ಸ್ಟ್ಯಾಂಡ್, ಬಟ್ಟೆ ಬರೆ, ಕಟ್ಟಿಗೆ, ವಿದ್ಯುತ್ ಸಂಪರ್ಕ ವ್ಯವಸ್ಥೆ ಸಮೀಪದ ಬಾಳೆ ಗಿಡ ಇತ್ಯಾದಿಗಳೂ ಕರಟಿ ಹೋಗಿವೆ.

ಸ್ಥಳಕ್ಕೆ ಇಂಡೇನ್ ಗ್ಯಾಸ್‌ ಏಜೆನ್ಸಿಯ ಅಧಿಕಾರಿಗಳು ಆಗಮಿಸಿ ಪರಿಶೀಲಿಸಿದರು. ಗ್ಯಾಸ್ ಪೈಪ್, ರೆಗ್ಯುಲೇಟರ್, ಸಿಲಿಂಡರ್ ತಪಾಸಣೆ ನಡೆಸಿದ್ದು, ರೆಗ್ಯುಲೇಟರ್ ಸಮೀಪ ಪೈಪ್ ನಿಂದ ಅನಿಲ ಸೋರಿಕೆಯಾಗಿರುವ ಶಂಕೆ ವ್ಯಕ್ತವಾಗಿದೆ. ಸುರತ್ಕಲ್ ಪೊಲೀಸರು ಹಾಗೂ ಫಾರೆನ್ಸಿಕ್ ತಜ್ಞರು ಕೂಡ ಪರಿಶೀಲಿಸಿದ್ದಾರೆ. ಮನೆ ಯಜಮಾನ ವಾಮನ ಅಯ್ಯಪ್ಪ ವ್ರತಧಾರಿಯಾಗಿದ್ದು, ಮನೆ ಬಳಿಯಿರುವ ಸಣ್ಣ ಅಡುಗೆ ಕೋಣೆಯಲ್ಲಿ ಪ್ರತ್ಯೇಕವಾಗಿ ಅಡುಗೆ ಮಾಡಿಕೊಳ್ಳುತ್ತಿದ್ದರು. ಕೋಣೆಯ ಒಳಗೆ ಮತ್ತೆರಡು ಅನಿಲ ಜಾಡಿಗಳಿದ್ದವು. ಆದರೆ ಅಪಾಯ ಸಂಭವಿಸಿಲ್ಲ.

Edited By : Ashok M
PublicNext

PublicNext

19/12/2024 12:15 pm

Cinque Terre

21.96 K

Cinque Terre

0

ಸಂಬಂಧಿತ ಸುದ್ದಿ