ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಜಿಲ್ಲೆಯಲ್ಲಿ ಪ್ರತೀ ವರ್ಷ 250 ಮಂದಿ ಅಪಘಾತದಲ್ಲಿ ಸಾವು - ಎಸ್ಪಿ ಅರುಣ್ ಕುಮಾರ್

ಉಡುಪಿ: ಪ್ರತಿ ವರ್ಷ ಉಡುಪಿ ಜಿಲ್ಲೆಯಲ್ಲಿ 250 ಮಂದಿ ಅಪಘಾತದಲ್ಲಿ ಮರಣ ಹೊಂದುತ್ತಿದ್ದಾರೆ ಎಂದು ಜಿಲ್ಲಾ ಎಸ್ ಪಿ ಡಾ. ಅರುಣ್ ಕುಮಾರ್ ಹೇಳಿದ್ದಾರೆ. ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ಬನ್ನಂಜೆ ನಾರಾಯಣ ಗುರು ಸಭಾಭವನದಲ್ಲಿ ಹಮ್ಮಿಕೊಂಡ ಅಪರಾಧ ತಡೆ ಮಾಸಾಚರಣೆ ಉದ್ಘಾಟಿಸಿ ಮಾತನಾಡಿದರು.

ಕಳ್ಳತನ ಹಾಗೂ ಆನ್ ಲೈನ್ ಮೂಲಕ ನಡೆಯುತ್ತಿರುವ ವಂಚನೆ ಕುರಿತು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಅವರು ಮಾಹಿತಿಯನ್ನು ನೀಡಿದರು.

ಮುಖ್ಯ ಅತಿಥಿಗಳಾಗಿ ತುಳು ಚಿತ್ರನಟ, ಹಾಸ್ಯ ಕಲಾವಿದ ಅರವಿಂದ್ ಬೋಳಾರ್ ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಡ್ರಗ್ಸ್ ಮುಂತಾದ ಮಾದಕ ವ್ಯಸನಕ್ಕೆ ಬಲಿಯಾಗದೆ ವಿದ್ಯಾರ್ಥಿಗಳು ತಮ್ಮ ಸುತ್ತಮುತ್ತ ನಡೆಯುವ ಅಪರಾಧ ಚಟುವಟಿಕೆಗಳನ್ನು ಪೊಲೀಸರಿಗೆ ನಿರ್ಭೀತಿಯಿಂದ ತಿಳಿಸಬೇಕು ಎಂದರು.

ಇದಕ್ಕೂ ಮುನ್ನ ಮಾಸಾಚರಣೆಯ ಅಂಗವಾಗಿ ಅರಿವು ಜಾಥಾ ನಡೆಯಿತು. ನಗರದ ಬೋರ್ಡ್ ಹೈಸ್ಕೂಲು ಮುಂಭಾಗದಲ್ಲಿ ಜಾಥಾ ಆರಂಭವಾಗಿ ನಗರದ ಪ್ರಮುಖ ಬೀದಿಗಳಲ್ಲಿ ಸಂಚಾರ ಮಾಡಿತು. ಉಡುಪಿ ಎಸ್ ಪಿ ಡಾ. ಅರುಣ್ ಕುಮಾರ್ ಕಾಲ್ನಡಿಗೆ ಜಾಥಾದ ನೇತೃತ್ವ ವಹಿಸಿದ್ದರು. ನಗರದ ಕಾಲೇಜು, ನರ್ಸಿಂಗ್ ವಿದ್ಯಾರ್ಥಿಗಳು ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Edited By : Vinayak Patil
PublicNext

PublicNext

19/12/2024 04:45 pm

Cinque Terre

9.87 K

Cinque Terre

0

ಸಂಬಂಧಿತ ಸುದ್ದಿ