This is a modal window.
Beginning of dialog window. Escape will cancel and close the window.
End of dialog window.
ನವದೆಹಲಿ: ನನ್ನ ಮುಂದೆ ಇದ್ದ ಸಂಸದರನ್ನು ರಾಹುಲ್ ಗಾಂಧಿ ತಳ್ಳಿದರು. ಈ ವೇಳೆ ಆ ಸಂಸದರು ನನ್ನ ಮೇಲೆ ಬಿದ್ದಿದ್ದರಿಂದ ನಾನು ನೆಲಕ್ಕೆ ಬಿದ್ದು ಗಾಯಗೊಂಡಿದ್ದೇನೆ ಎಂದು ಬಿಜೆಪಿ ಸಂಸದ ಪ್ರತಾಪ್ ಸಾರಂಗಿ ಆರೋಪಿಸಿದ್ದಾರೆ.
ಕೇಂದ್ರ ಸಚಿವ ಅಮಿತ್ ಶಾ ಅವರು ಅಂಬೇಡ್ಕರ್ ಕುರಿತಾಗಿ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಸಂಸದಸರು ಸಂಸತ್ ಭವನದ ಎದುರು ಇಂದು ಪ್ರತಿಭಟನೆ ಕೈಗೊಂಡಿದ್ದರು. ಈ ವೇಳೆ ನಡೆದ ಘರ್ಷಣೆಯಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಾರಂಗಿ ಗಾಯಗೊಂಡಿದ್ದಾರೆ.
PublicNext
19/12/2024 05:36 pm