ಆಲೂರು: ಚಲಿಸುತ್ತಿದ್ದ ಲಾರಿಯ ಟಯರ್ ಸ್ಫೋಟಗೊಂಡು ರಸ್ತೆ ಬದಿಗೆ ಲಾರಿ ಉರುಳಿ ಬಿದ್ದಿರುವ ಘಟನೆ ಹಾಸನ ಜಿಲ್ಲೆ ಆಲೂರು ತಾಲ್ಲೂಕಿನ ಈಚರವಳ್ಳಿ ಕೂಡಿಗೆ ಬಳಿ ಸಂಭವಿಸಿದೆ.
ವೇಗವಾಗಿ ತೆರಳುತ್ತಿದ್ದ ಈ ಲಾರಿ ರಾಷ್ಟ್ರೀಯ ಹೆದ್ದಾರಿ 75ರ ಈಚರವಳ್ಳಿ ಕ್ರಾಸ್ ಬಳಿ ಟಯರ್ ಸ್ಫೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿ ಬಿದ್ದಿದೆ. ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಆಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
PublicNext
19/12/2024 05:42 pm