ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು : ರಸ್ತೆ ದಾಟಲು ನಿಂತಿದ್ದ ಪಾದಚಾರಿಗೆ ಬಸ್ಸು ಡಿಕ್ಕಿಯಾಗಿ ಸಾವು

ಉಚ್ಚಿಲ: ರಸ್ತೆ ದಾಟಲು ನಿಂತಿದ್ದ ಪಾದಚಾರಿಗೆ ಸರಕಾರಿ ಬಸ್ಸು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮೃತಪಟ್ಟ ಘಟನೆ ಗುರುವಾರ ಬೆಳಿಗ್ಗೆ ಸಂಭವಿಸಿದೆ. ಮೃತ ಪಟ್ಟವರನ್ನು ಉಚ್ಚಿಲ ಪಡುವಿನ ನಿವಾಸಿ ಶಿವಣ್ಣ (65) ಎಂದು ಗುರುತಿಸಲಾಗಿದೆ.

ಮಂಗಳೂರಿನಿಂದ ಉಡುಪಿಗೆ ಸಾಗುತ್ತಿದ್ದ ಸರಕಾರಿ ಬಸ್ಸು ರಸ್ತೆ ದಾಟಲು ನಿಂತಿದ್ದ ಶಿವಣ್ಣರಿಗೆ ಗುದ್ದಿದೆ. ತೀವ್ರ ಗಾಯಗೊಂಡ ಅವರನ್ನು ಉಚ್ಚಿಲದ ಎಸ್ ಡಿಪಿಐ ಆಂಬುಲೆನ್ಸ್ ನಲ್ಲಿ ಉಡುಪಿಯ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಆಸ್ಪತ್ರೆಯ ಹಾದಿಯಲ್ಲಿಯೇ ಅವರು ಕೊನೆ ಉಸಿರೆಳೆದಿದ್ದಾರೆ.

ಪಡುಬಿದ್ರಿ ಠಾಣಾಧಿಕಾರಿ ಪ್ರಸನ್ನರವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಅವೈಜ್ಞಾನಿಕ ಕಾಮಗಾರಿಯಿಂದ ಪರಿಸರದಲ್ಲಿ ದಿನನಿತ್ಯ ಅಪಘಾತ ಸಂಭವಿಸುತ್ತಿದೆ. ಈ ಬಗ್ಗೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Shivu K
PublicNext

PublicNext

19/12/2024 07:54 pm

Cinque Terre

20.21 K

Cinque Terre

0

ಸಂಬಂಧಿತ ಸುದ್ದಿ