ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕೋಡಿ: ಭೀಕರ ರಸ್ತೆ ಅಪಘಾತ - ಪೊಲೀಸ್ ಕಾನ್ಸ್ಟೇಬಲ್ ಸಾವು

ಚಿಕ್ಕೋಡಿ: ಎರಡು ಬೈಕ್‌ಗಳ ನಡುವೆ ಡಿಕ್ಕಿಯಾಗಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಪರಿಣಾಮ ಅಪಘಾತದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಮಂಜುನಾಥ್ ಸತ್ತಿಗೇರಿ (26) ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ.

ರಾಯಬಾಗ ರಸ್ತೆಯಲ್ಲಿ ನಂದಿಕುರಳಿ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಮೂಲತಃ ಮಹಾಲಿಂಗಪುರದ ಕೆಸರಗೊಪ್ಪ ಗ್ರಾಮದ ನಿವಾಸಿ ಮಂಜುನಾಥ ಕಳೆದ 5 ವರ್ಷಗಳಿಂದ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಇವತ್ತು ಕುಡಚಿಯಿಂದ ಬೈಕ್ ಮೇಲೆ ತೆರಳುತ್ತಿದ್ದಾಗ ಅಂಕಲಿ ರಾಯಬಾಗ ರಸ್ತೆಯಲ್ಲಿ ನಂದಿಕುರಳಿ ಕ್ರಾಸ್ ಬಳಿ ಎರಡು ಬೈಕ್‌ಗಳ ನಡುವೆ ಅಪಘಾತ ಸಂಭವಿಸಿದೆ.

ಆಕಸ್ಮಿಕ ಅವರ ಸಾವಿನಿಂದ ಅವರ ಕುಟುಂಬಕ್ಕೆ, ಪೊಲೀಸ್ ಇಲಾಖೆಗೆ, ಸ್ನೇಹ ಬಳಗಕ್ಕೆ ಭಾರಿ ಆಘಾತ ಉಂಟಾಗಿದೆ.

ಸ್ಥಳಕ್ಕೆ ಪೊಲೀಸರು ದೌಡಾಯಿಸಿ, ತನಿಖೆ ಕೈಗೊಂಡಿದ್ದಾರೆ.

Edited By : Shivu K
PublicNext

PublicNext

19/12/2024 08:25 pm

Cinque Terre

28.98 K

Cinque Terre

1

ಸಂಬಂಧಿತ ಸುದ್ದಿ