ಚಿತ್ರದುರ್ಗದ: ಆಡುಮಲ್ಲೇಶ್ವರ ಕಿರು ಮೃಗಾಲಯದ ಅಭಿವೃದ್ಧಿಗಾಗಿ ಪ್ರಾಣಿ ಪಕ್ಷಿಗಳನ್ನು ದತ್ತು ಪಡೆಯಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ಆಡು ಮಲ್ಲೇಶ್ವರ ಕಿರು ಮೃಗಾಲಯದಲ್ಲಿ 315 ವಿವಿಧ ರೀತಿಯ ಪ್ರಾಣಿ ಪಕ್ಷಿಗಳನ್ನು ಪ್ರದರ್ಶಿಸಲಾಗುತ್ತಿದೆ.
ಸ್ವ-ಇಚ್ಛೆದಾರರು, ಪ್ರಾಣಿ ಪ್ರಿಯರು ಮೃಗಾಲಯದಲ್ಲಿನ ಪ್ರಾಣಿ-ಪಕ್ಷಿಗಳನ್ನು ದತ್ತು ಪಡೆದುಕೊಂಡಲ್ಲಿ ಮೃಗಾಲಯದ ಪ್ರಾಣಿ, ಪಕ್ಷಿಗಳ ಆಹಾರ, ವೈದ್ಯಕೀಯ ವೆಚ್ಚ, ಅಭಿವೃದ್ಧಿ ಕಾಮಗಾರಿ ಹಾಗೂ ಇತ್ಯಾದಿ ವೆಚ್ಚಗಳಿಗೆ ಮತ್ತು ಮೃಗಾಲಯದ ಅಭಿವೃದ್ಧಿಗೆ ಮತ್ತಷ್ಟು ಸಹಾಯಕವಾಗುತ್ತದೆ. ಅಲ್ಲದೇ ಪ್ರಾಣಿ ದತ್ತು ಪಡೆಯಲು ನೀಡಿದ ಮೊತ್ತಕ್ಕೆ ಆದಾಯ ತೆರಿಗೆ ಕಾಯ್ದೆ 1961ರ ಕಲಂ 80ಜಿ(5)(6)ರನ್ವಯ ಶೇ.50ರಷ್ಟು ಆದಾಯ ತೆರಿಗೆ ವಿನಾಯಿತಿ ನೀಡಲಾಗಿದೆ.
Kshetra Samachara
19/12/2024 09:28 pm