ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೀದರ್: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ - ಸಿಎಂ ಸಿದ್ದರಾಮಯ್ಯ

ಬೀದರ್: ಜಿಲ್ಲೆಯ ಕಾರಂಜಾ ಯೋಜನೆಗಾಗಿ ಭೂಮಿ ಕಳೆದುಕೊಂಡು ನ್ಯಾಯಯುತ ಪರಿಹಾರಕ್ಕಾಗಿ ಹೋರಾಟ ನಡೆಸುತ್ತಿರುವ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದರು.

ಬೆಳಗಾವಿ ಸುವರ್ಣಸೌಧದ ಸಮಿತಿ ಕೊಠಡಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ, ಪೌರಾಡಳಿತ ಸಚಿವ ರಹೀಂಖಾನ್, ಜಿಲ್ಲೆಯ ಶಾಸಕರ ಉಪಸ್ಥಿತಿಯಲ್ಲಿ ಸಂತ್ರಸ್ತರ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, 'ಇದು ಹಲವು ವರ್ಷಗಳ ಹಿಂದಿನ ಸಮಸ್ಯೆಯಾಗಿದ್ದು, ಈ ಬಗ್ಗೆ ಅಧ್ಯಯನ ನಡೆಸಲು ಸಮಿತಿ ರಚಿಸುವುದಾಗಿ' ತಿಳಿಸಿದರು.

ಇದಕ್ಕೂ ಮುನ್ನ ಮಾತನಾಡಿದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ, 'ಬೀದರ್ ಜಿಲ್ಲೆಯ 29,227 ಹೆಕ್ಟೇರ್ ಭೂಮಿಗೆ ನೀರಾವರಿ ಸೌಲಭ್ಯ ಕಲ್ಪಿಸಲು 1970ರ ದಶಕದಲ್ಲಿ ಕಾರಂಜಾ ಜಲಾಶಯ ನಿರ್ಮಾಣಕ್ಕಾಗಿ ಭೂಸ್ವಾಧೀನ ಮಾಡಲಾಗಿದ್ದು, ಬೆಲೆ ಕಟ್ಟಲೂ ಸಾಧ್ಯವಾಗದ ಭೂಮಿ ಕಳೆದುಕೊಂಡಿರುವ ಸಂತ್ರಸ್ತರಿಗೆ ಇಂದಿಗೂ ಸೂಕ್ತ ಪರಿಹಾರ ಲಭಿಸಿಲ್ಲ. ಭೂಮಿ ಕಳೆದುಕೊಂಡ ಕೆಲವರು ನ್ಯಾಯಾಲಯದಲ್ಲಿ ದಾವೆ ಹೂಡಿದ್ದು, ಪ್ರತಿ ಎಕರೆಗೆ 88 ಸಾವಿರ ಪರಿಹಾರ ನೀಡುವಂತೆ ಒಂದು ಪ್ರಕರಣದಲ್ಲಿ ನ್ಯಾಯಾಲಯ ಆದೇಶಿಸಿದೆ. ಹೀಗಾಗಿ ಒಂದು ಬಾರಿಯ ವಿಶೇಷ ಪ್ಯಾಕೇಜ್ (ಕೃಪಾಧನ) ಪ್ರಕಟಿಸಬೇಕು' ಎಂದು ಮನವಿ ಮಾಡಿದರು.

ರಾಜ್ಯ ಹೈಕೋರ್ಟ್ ಚಂದ್ರಕಾಂತ್ ಮತ್ತು ವಿಶೇಷ ಭೂಸ್ವಾಧೀನಾಧಿಕಾರಿ, ಕರ್ನಾಟಕ ಸರ್ಕಾರ ಪ್ರಕರಣದಲ್ಲಿ ಒಂದೇ ಅಧಿಸೂಚನೆಯಡಿ ಭೂಸ್ವಾಧೀನವಾದ ಎಲ್ಲರಿಗೂ ಸಮಾನವಾದ ಪರಿಹಾರ ನೀಡಬೇಕು ಎಂದು ತಿಳಿಸಿದೆ. ಈ ಎಲ್ಲದರ ಹಿನ್ನೆಲೆಯಲ್ಲಿ ಸ್ವಾಭಾವಿಕ ನ್ಯಾಯದ ತತ್ವದಡಿ ಮತ್ತು ನ್ಯಾಯ ಸಮಾನತೆ ಕಾಪಾಡಲು ಹೆಚ್ಚಿನ ಪರಿಹಾರ ನೀಡುವುದು ಉಚಿತವಾಗಿದೆ' ಎಂದು ಸಭೆಗೆ ಈಶ್ವರ ಖಂಡ್ರೆ ತಿಳಿಸಿದರು.

'ಕಾರಂಜಾ ಮುಳುಗಡೆ ಸಂತ್ರಸ್ತರಿಗೆ ಮಾನವೀಯತೆಯ ನೆಲೆಗಟ್ಟಿನಲ್ಲಿ ಒಂದು ಬಾರಿಯ ವಿಶೇಷ ಪ್ಯಾಕೇಜ್ (ಕೃಪಾಧನ -ಎಕ್ಸ್ ಗ್ರೇಷಿಯಾ) ಮೊತ್ತ ನೀಡಿ ಅವರ ಬದುಕಿಗೆ ತಾವು ಆಸರೆ ಆಗಬೇಕು' ಎಂದು ಕೋರಿದರು.

ಶಾಸಕರಾದ ಶೈಲೇಂದ್ರ ಬೆಲ್ದಾಳೆ, ಪ್ರಭು ಚವಾಣ್, ಮಾಜಿ ಸಚಿವ ರಾಜಶೇಖರ ಪಾಟೀಲ್ ಮತ್ತಿತರರೂ ಕಾರಂಜಾ ಸಂತ್ರಸ್ತರ ಸಮಸ್ಯೆಯನ್ನು ಮಾನವೀಯತೆಯಿಂದ ಪರಿಗಣಿಸಬೇಕು, ಕಾನೂನಾತ್ಮಕವಾಗಿ ಪರಿಗಣಿಸಬಾರದು ಎಂದು ಮನವಿ ಮಾಡಿದರು.

ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ ತಾಂತ್ರಿಕ ಸಮಿತಿ ಅಧ್ಯಯನ ವರದಿ ಬಂದ ಬಳಿಕ ಕ್ರಮ ವಹಿಸುವುದಾಗಿ ತಿಳಿಸಿದರು.

ಲಕ್ಷ್ಮಣ ದಸ್ತಿ, ಸಂಸ್ಥಾಪಕ ಅಧ್ಯಕ್ಷ, ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಬೀದರ್ ಜಿಲ್ಲೆಯ ಕಾರಂಜಾ ಸಂತ್ರಸ್ತರ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಸೇರಿದಂತೆ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು ಪಕ್ಷಭೇದ ಮರೆತು ಕಾರಂಜಾ ಸಂತ್ರಸ್ತರ ಪರವಾಗಿ ಮಾತನಾಡಿದರು. ಸಿಎಂ ಸ್ಪಂದಿಸಿ, ಬೇಡಿಕೆಗಳ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚಿಸಿ ಅದನ್ನು ಆಧರಿಸಿ ಪರಿಹಾರ ಒದಗಿಸುವ ಭರವಸೆ ನೀಡಿರುವುದು ಖುಷಿ ತಂದಿದೆ. ಸರ್ಕಾರದ ಕ್ರಮವನ್ನು ಸ್ವಾಗತಿಸುವೆ.

Edited By : Nagaraj Tulugeri
Kshetra Samachara

Kshetra Samachara

19/12/2024 09:30 pm

Cinque Terre

19.82 K

Cinque Terre

0

ಸಂಬಂಧಿತ ಸುದ್ದಿ