ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾವೇರಿ; ವಿದ್ಯುತ್ ತಂತಿ ತಗುಲಿ ಲಕ್ಷಾಂತರ ಮೌಲ್ಯದ ಕಬ್ಬು ಕಣ್ಣೆದುರೇ ಭಸ್ಮ!

ಹಾವೇರಿ: ವಿದ್ಯುತ್ ತಂತಿ ಸ್ಪರ್ಶದಿಂದಾಗಿ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಕಬ್ಬು ಸುಟ್ಟು ಕರಕಲಾದ ಘಟನೆ ಹಾವೇರಿ ತಾಲೂಕು ಸಂಗೂರು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಕಬ್ಬು ಬೆಳೆಗಾರ ಹೇಮಣ್ಣ ಹೆಗ್ಗಣ್ಣನವರ್ ಅವರ ಐದೂವರೆ ಎಕರೆ ಜಮೀನಿನಲ್ಲಿ ಬೆಳೆದ ಕಬ್ಬಿನ ಬೆಳೆಗೆ ಬೆಂಕಿ ತಗುಲಿ ಅವಘಡ ಸಂಭವಿಸಿದೆ.

ರೈತ ಹೇಮಣ್ಣನವರ ಜಮೀನಿನಲ್ಲಿ ಹಾದು ಹೋಗಿರುವ ವಿದ್ಯುತ್ ತಂತಿ ಸ್ಪರ್ಶಿಸಿ ಕಬ್ಬು ಸಂಪೂರ್ಣವಾಗಿ ಸುಟ್ಟು ಹೋಗಿದೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆದಿದ್ದ ಕಬ್ಬು ಅವರ ಕಣ್ಣ ಎದುರಿಗೇ ಸುಟ್ಟು ಕರಕಲಾಗಿದೆ!

ಅವಘಡಕ್ಕೆ ಹೆಸ್ಕಾಂ ಅ‌ಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಹೇಮಣ್ಣ ಆರೋಪಿಸಿದ್ದಾರೆ. ಕೆಲವು ದಿನಗಳ ಹಿಂದೆ ಅಧಿಕಾರಿಗಳಿಗೆ ಈ ಕುರಿತಂತೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಲಿಲ್ಲ ಎಂದು ಹೇಮಣ್ಣ ಆರೋಪಿಸಿದ್ದಾರೆ.

Edited By : Nagesh Gaonkar
PublicNext

PublicNext

19/12/2024 10:52 pm

Cinque Terre

27.16 K

Cinque Terre

0