ಮುಲ್ಕಿ: ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದೊಡ್ಡ ರಂಗ ಪೂಜೆ, ಶ್ರೀ ದೇವರ ಉತ್ಸವ ಬಲಿ , ವಿಮಾನ ರಥೋತ್ಸವ ವಿಜೃಂಭಣೆಯಿಂದ ನಡೆಯಿತು.
ಈ ಸಂದರ್ಭ ಕ್ಷೇತ್ರದ ಅರ್ಚಕರಾದ ನರಸಿಂಹ ಭಟ್, ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತ ಅರಸರು, ಗೋಪಾಲಕೃಷ್ಣ ಭಟ್, ಶ್ರೀನಾಥ್ ಭಟ್,ನಾಗೇಶ್ ಬಪ್ಪನಾಡು, ಚಂದ್ರಶೇಖರ ಸುವರ್ಣ, ಅಕೌಂಟೆಟ್ ಶಿವಶಂಕರ್, ಶರತ್ ಕಾರ್ನಾಡ್, ರಾಧಾಕೃಷ್ಣರಾವ್ ಸೇವಾರ್ಥಿ ವೇದವ್ಯಾಸ (ಯಾದವ) ಬಿ ಬಂಗೇರ ಮತ್ತಿತರರು ಉಪಸ್ಥಿತರಿದ್ದರು.
ಬಳಿಕ ಮಹಾ ಅನ್ನಸಂತರ್ಪಣೆ, ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಶರತ್ ಹಳೆಯಂಗಡಿ ರವರಿಂದ ಭಕ್ತಿ ಸಂಗೀತ ಕಾರ್ಯಕ್ರಮ ನಡೆಯಿತು.
Kshetra Samachara
20/12/2024 10:25 am