ಮಂಡ್ಯ : ಕನ್ನಡ ಅಕ್ಷರ ಜಾತ್ರೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇಂದು ಬೆಳಿಗ್ಗೆ ನಾಡಧ್ವಜ, ಕನ್ನಡಪರಿಷತ್ ಧ್ವಜ ಹಾಗೂ ರಾಷ್ಟ್ರಧ್ವಜಾರೋಹಣ ಮಾಡುವ ಮೂಲಕ ಅಧಿಕೃತವಾಗಿ ಚಾಲನೆ ನೀಡಲಾಯಿತು.
ಸಮ್ಮೇಳನಾಧ್ಯಕ್ಷರಾದ ಗೊ.ರು.ಚನ್ನಬಸಪ್ಪ ಅವರ ಉಪಸ್ಥಿತಿಯಲ್ಲಿ ಕೃಷಿ ಸಚಿವ ಹಾಗೂ ಸಮ್ಮೇಳನ ಸ್ವಾಗತ ಸಮಿತಿಯ ಅಧ್ಯಕ್ಷ ಎನ್. ಚಲುವರಾಯಸ್ವಾಮಿ ಧ್ವಜಾರೋಹಣ ನೆರವೇರಿಸಿದರು.
ಧ್ವಜಾರೋಹಣದೊಂದಿಗೆ 87 ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಚಟುವಟಿಕೆಗಳು ಅಧಿಕೃತವಾಗಿ ಶುರುವಾಗಿದೆ.
ಸಮ್ಮೇಳನದ ವೇದಿಕೆ ಆವರಣದಲ್ಲಿ ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ, ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಎನ್ ಚಲುವರಾಯ ಸ್ವಾಮಿ ಅವರು ರಾಷ್ಟ್ರ ಧ್ವಜಾರೋಹಣ ಮಾಡಿದರು.
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ ಮಹೇಶ್ ಜೋಶಿ ಪರಿಷತ್ತಿನ ಧ್ವಜ, ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಚಾಲಕ ಮೀರಾ ಶಿವಲಿಂಗಯ್ಯ ನಾಡ ಧ್ವಜಾರೋಹಣ ಮಾಡಿದರು.
PublicNext
20/12/2024 11:14 am