ಚಿತ್ರದುರ್ಗ: ಬಿಸಿಯೂಟ ನೌಕರರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಗರದಲ್ಲಿಂದು ಪ್ರತಿಭಟನೆ ನಡೆಸಲಾಯಿತು.
ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಚಿತ್ರದುರ್ಗ ಜಿಲ್ಲಾ ಸಮಿತಿಯ ವತಿಯಿಂದ ನಗರದ ಪ್ರವಾಸಿ ಮಂದಿರದಿಂದ ಜಿಲ್ಲಾ ಪಂಚಾಯತ್ ಕಚೇರಿ ವರೆಗೆ ಮೆರವಣಿಗೆ ಮೂಲಕ ಬಂದು ಪ್ರತಿಭಟನೆ ನಡೆಸಿ ಜಿಲ್ಲಾ ಪಂಚಾಯತ್ ನ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಬಿಸಿಯೂಟ ನೌಕರರಿಗೆ ವೇತನ ಹೆಚ್ಚಳ ಮಾಡಬೇಕು. 2014 ರಿಂದ ಕೇಂದ್ರ ಸರ್ಕಾರ ಯಾವುದೇ ಗೌರವಧನ ಹೆಚ್ಚಳ ಮಾಡಿಲ್ಲವಾದ್ದರಿಂದ ಕೇಂದ್ರ ಸರ್ಕಾರವು 26000 ರೂ.ಗಳಿಗೆ ಗೌರವಧನ ಹೆಚ್ಚಿಸಬೇಕು ಎಂದು ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಸಿ ಪ್ರತಿಭಟನೆ ನಡೆಸಿ ಜಿಲ್ಲಾ ಪಂಚಾಯತ್ ನ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
Kshetra Samachara
20/12/2024 12:36 pm