ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶೈಕ್ಷಣಿಕ ಪ್ರವಾಸದ ಬಸ್ ಪಲ್ಟಿ, 34 ವಿದ್ಯಾರ್ಥಿಗಳಿಗೆ ಗಾಯ ನಾಲ್ವರು ಗಂಭೀರ

ಹೊನ್ನಾವರ : ಕೋಲಾರದಿಂದ ಉತ್ತರಕನ್ನಡ ಜಿಲ್ಲೆಯ ಪ್ರವಾಸಕ್ಕೆ ಬಂದಿದ್ದಿ ವಿದ್ಯಾರ್ಥಿಗಳಿದ್ದ ಬಸ್ ಪಲ್ಟಿಯಾಗಿ 30ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಹೊನ್ನಾವರ ತಾಲೂಕಿನ ಮುಗ್ವಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆರೋಳ್ಳಿ ತಿರುವಿನಲ್ಲಿ ನಡೆದಿದೆ.

ಕೋಲಾರ ಜಿಲ್ಲೆ ಮಾಲೂರು ತಾಲೂಕು ಮಾಸ್ತಿ ಹಳ್ಳಿಯ ಕರ್ನಾಟಕ ಪ್ರೌಢಶಾಲೆ ಮಾಸ್ತಿಹಳ್ಳಿ ಶಾಲಾ ಮಕ್ಕಳ ಖಾಸಗಿ ಪ್ರವಾಸ ವಾಹನವು ಜಿಲ್ಲಾ ಪ್ರವಾಸ ಮುಗಿಸಿಕೊಂಡು ಗೋಕರ್ಣದಿಂದ ಪುನಃ ಕೋಲಾರಕ್ಕೆ ಹೋಗುವಾಗ ರಾತ್ರಿ 12 ಗಂಟೆ ಸುಮಾರಿಗೆ ಎರಡು ವಾಹನಗಳ ಪೈಕಿ ಒಂದು ವಾಹನ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ.

ವಾಹನದಲ್ಲಿ ಇದ್ದ 40ಶಾಲಾ ಮಕ್ಕಳ ಪೈಕಿ 34 ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಹಾಗೂ ಶಿಕ್ಷಕರಿಗೆ ಚಿಕ್ಕ ಪುಟ್ಟ ಗಾಯಗಳಾಗಿದ್ದು ಅವರನ್ನು ತಕ್ಷಣ ಹೊನ್ನಾವರದ ಸರಕಾರಿ ಆಸ್ಪತ್ರೆಗೆ ಪೊಲೀಸ್ ಮತ್ತು ಸ್ಥಳೀಯರ ಸಹಕಾರದೊಂದಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಇನ್ನೂ ಗಂಭೀರವಾಗಿ ಗಾಯಗೊಂಡ ನಾಲ್ವರು ವಿದ್ಯಾರ್ಥಿಗಳಿಗೆ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ‌ ರವಾನಿಸಲಾಗಿದೆ. ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆನೆ ನಡೆದಿದೆ.

Edited By : Nirmala Aralikatti
PublicNext

PublicNext

20/12/2024 12:42 pm

Cinque Terre

9.12 K

Cinque Terre

0

ಸಂಬಂಧಿತ ಸುದ್ದಿ