ಬೆಂಗಳೂರು : ಲಕ್ಷ್ಮಿ ಹೆಬ್ಬಾಳ್ಕರ್ ಕುರಿತು ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ ಅಶ್ಲೀಲ ಪದ ಬಳಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿದೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕೇಂದ್ರ ಕಚೇರಿಗೆ ಪೊಲೀಸ್ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದೆ.
ಬಿಜೆಪಿ ಕಚೇರಿಯಷ್ಟೇ ಅಲ್ದೇ ಬೆಂಗಳೂರಿನ ಸಿಟಿ ರವಿ ನಿವಾಸ ಹಾಗೂ ಚಿಕ್ಕಮಗಳೂರಿನ ಸಿಟಿ ರವಿ ನಿವಾಸಕ್ಕೂ ಪೊಲೀಸ್ ಭದ್ರತೆ ನೀಡಲಾಗಿದೆ. ಲಕ್ಷ್ಮಿ ಹೆಬ್ಬಾಳ್ಕರ್ ಕುರಿತು ಸಿಟಿ ರವಿ ಬಳಸಿರುವ ಅಶ್ಲೀಲ ಪದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿ ಮತ್ತು ನಿವಾಸದೆದರು ಮುತ್ತಿಗೆ ಹಾಕಿ ಪ್ರತಿಭಟಿಸುವ ಸಾಧ್ಯತೆ ಇದೆ. ನಿನ್ನೆ ಸಿಟಿ ರವಿ ವಿರುದ್ಧ ಸುವರ್ಣಸೌಧದಲ್ಲಿ ಹಲ್ಲೆಗೆ ಯತ್ನ ನಡೆದಿತ್ತು ಅಲ್ದೇ ಸಿಟಿ ರವಿ ಬಂಧನದ ಬಳಿಕವೂ ಪೊಲೀಸ್ ಠಾಣೆ ಮುಂದೆ ಪ್ರತಿಭಟಿಸಿದ್ದ ಕಾಂಗ್ರೆಸ್ ಕಾರ್ಯಕರ್ತರು. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬಿಜೆಪಿ ಕಚೇರಿ ಮತ್ತು ಸಿಟಿ ರವಿ ನಿವಾಸದ ಬಳಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.
PublicNext
20/12/2024 01:01 pm