ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾದರಿ

ಕುಂದಾಪುರ : ರಾಜ್ಯಾದ್ಯಂತ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಘದದ ಮೂಲಕ ಶಾಲೆ ಹಾಗೂ ದೇವಸ್ಥಾನಗಳ ಅಭಿವೃದ್ಧಿ ಮತ್ತು ಉತ್ತಮ ಸಾಮಾಜಿಕ, ಧಾರ್ಮಿಕ ಕಾರ್ಯಕ್ರಮಗಳಿಗೆ ನೆರವು ನೀಡುತ್ತಿದ್ದು, ಪ್ರತಿವರ್ಷ ಕೋಟ್ಯಾಂತರ ರೂ.ಗಳನ್ನು ಇಂತಹ ಉತ್ತಮ ಕಾರ್ಯಗಳಿಗೆ ವಿನಿಯೋಗಿಸಲಾಗುತ್ತಿದೆ. ಗಂಗೊಳ್ಳಿಯ ಶ್ರೀ ಶಾರದ ಮಂಟಪ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ಪ್ರಸಾದ ರೂಪದಲ್ಲಿ ಒಂದು ಲಕ್ಷ ಸಹಾಯಧನ ಮಂಜೂರಾಗಿದೆ. ಗಂಗೊಳ್ಳಿ ಗ್ರಾಮದ ಮೂರು ಸಾರ್ವಜನಿಕ ರುದ್ರಭೂಮಿಗಳಲ್ಲಿ ಸಿಲಿಕಾನ್ ಛೇಂಬರ್ ನಿರ್ಮಾಣಕ್ಕೆ ಸಹಾಯ ಒದಗಿಸಲಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬೈಂದೂರು ತಾಲೂಕು ಯೋಜನಾಧಿಕಾರಿ ವಿನಾಯಕ ಪೈ ಹೇಳಿದರು. ಅವರು ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಮೂಲಕ ಗಂಗೊಳ್ಳಿಯ ಶ್ರೀ ಶಾರದಾ ಮಂಟಪ ನಿರ್ಮಾಣಕ್ಕೆ ಮಂಜೂರಾದ ಒಂದು ಲಕ್ಷ ರೂ. ಮಂಜೂರಾತಿ ಪತ್ರವನ್ನು ಶ್ರೀ ಶಾರದೋತ್ಸವ ಸಮಿತಿಗೆ ಹಸ್ತಾಂತರಿಸಿ ಅವರು ಮಾತನಾಡಿದರು.

ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಅಧ್ಯಕ್ಷ ಸತೀಶ್ ಜಿ. ಅಧ್ಯಕ್ಷತೆ ವಹಿಸಿದ್ದರು. ಜನಜಾಗೃತಿ ವೇದಿಕೆ ಬೈಂದೂರು ತಾಲೂಕು ಅಧ್ಯಕ್ಷ ಸುಧಾಕರ ಅಚಾರ್ಯ ತ್ರಾಸಿ ಮತ್ತು ಭಜನಾ ಪರಿಷತ್ ಸಂಯೋಜಕ ಕೃಷ್ಣ ಪೂಜಾರಿ ಶುಭ ಹಾರೈಸಿದರು. ಇದೇ ಸಂದರ್ಭ ಯೋಜನಾಧಿಕಾರಿ ವಿನಾಯಕ ಪೈ ಅವರನ್ನು ಗೌರವಿಸಲಾಯಿತು.

ಜನಜಾಗೃತಿ ವೇದಿಕೆ ಸದಸ್ಯ ಬಿ.ರಾಘವೇಂದ್ರ ಪೈ, ಸಮಿತಿಯ ಗೌರವಾಧ್ಯಕ್ಷ ಬಿ.ಲಕ್ಷ್ಮೀಕಾಂತ ಮಡಿವಾಳ, ಪುರೋಹಿತರಾದ ಜಿ.ರಾಘವೇಂದ್ರ ಆಚಾರ್ಯ, ಗೋಪಾಲ ಖಾರ್ವಿ ದಾವನಮನೆ, ಮಹಿಳಾ ಮಂಡಳಿ ಕಾರ್ಯದರ್ಶಿ ಸುಜಾತಾ ಬಿ.ಖಾರ್ವಿ, ವಿಪತ್ತು ನಿರ್ವಹಣಾ ಘಟಕದ ಪ್ರತಿನಿಧಿ ಪ್ರಶಾಂತ ಖಾರ್ವಿ, ಒಕ್ಕೂಟದ ಅಧ್ಯಕ್ಷರಾದ ಉಷಾ ಖಾರ್ವಿ, ನಾಗರತ್ನ ಶೇರುಗಾರ್, ಮಹೇಶ್ ಶೇಟ್ ಮತ್ತು ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

20/12/2024 01:29 pm

Cinque Terre

376

Cinque Terre

0

ಸಂಬಂಧಿತ ಸುದ್ದಿ