ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಸಿ.ಟಿ. ರವಿ ಭಾವಚಿತ್ರಕ್ಕೆ ತಿಥಿ ಮಾಡುವುದರ ಮೂಲಕ ಹೋರಾಟ ಮಾಡಿದ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು

ಹುಬ್ಬಳ್ಳಿ: ನಿನ್ನೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ, ಬಿಜೆಪಿಯ ಪರಿಷತ್ ಸದಸ್ಯ ಸಿಟಿ ರವಿ ಅವಾಚ್ಯ ಶಬ್ಧ ಬಳಸಿ ನಿಂದಿಸಿರುವುದನ್ನು ಖಂಡಿಸಿ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ, ಸಿಟಿ ರವಿ ಭಾವಚಿತ್ರಕ್ಕೆ ಮಾಲಿ, ಬಾಳೆಹಣ್ಣು, ನಿಂಬೆಹಣ್ಣು ಇಡುವುದರ ಮೂಲಕ ತಿಥಿ ಮಾಡಿ ಆಕ್ರೋಶ ಹೊರಹಾಕಿದರು.

ಹುಬ್ಬಳ್ಳಿ ಸಂಗೊಳ್ಳಿ ರಾಯಣ್ಣ ಸರ್ಕಲ್ ಮುಂದೆ ಹೋರಾಟ ಮಾಡಿದ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು, ಸತ್ತಾನಪ್ಪೋ ಸತ್ತಾನೋ ಸಿಟಿ ರವಿ ಸತ್ತಾನೋ ಎಂದು ಘೋಷಣೆ ಮಾಡುವುದರ ಮೂಲಕ, ಸಿಟಿ ರವಿ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆಯುವುದರ ಮೂಲಕ ಆಕ್ರೋಶ ಹೊರಹಾಕಿದರು.

Edited By : Somashekar
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

20/12/2024 01:30 pm

Cinque Terre

119.61 K

Cinque Terre

15

ಸಂಬಂಧಿತ ಸುದ್ದಿ