ಬೆಳಗಾವಿ : ವಿಧಾನ ಪರಿಷತ್ ಸದಸ್ಯನನ್ನು ಟೆರರಿಸ್ಟ್ ರೀತಿಯಲ್ಲಿ ನಡೆಸಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿಕಾರಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಎಂಎಲ್‌ಸಿ ಸಿಟಿ ರವಿ ಅವರಿಗೆ ಗಾಯವಾಗಿದ್ದರೂ ಆಸ್ಪತ್ರೆಗೆ ಕರೆದುಕೊಂಡು ಹೋಗಿಲ್ಲ ಎಲ್ಲೂ ಕೂರುವುದಕ್ಕೂ ಅವಕಾಶ ಕೊಟ್ಟಿಲ್ಲ. ಬದಲಿಗೆ ರಾತ್ರಿಯೆಲ್ಲ 400-500 ಕಿ.ಮೀ ಸುತ್ತಾಡಿಸಿದ್ದಾರೆ ಎಂದು ಆರೋಪಿಸಿದರು.
ಬೆಂಗಳೂರಿಗೆ ಹಾಜರು ಪಡಿಸುತ್ತೇವೆ ಎಂದು ಗದಗ, ರಾಮದುರ್ಗ ಸೇರಿ ಎಲ್ಲಾ ಪೊಲೀಸ್ ಸ್ಟೇಷನ್ ಸುತ್ತಾಡಿಸಿ ಈಗ ವಾಪಸ್ ಬೆಳಗಾವಿಗೆ ಕರೆತಂದಿದ್ದಾರೆ. ಇದರ ಜೊತೆಗೆ ನಡುರಸ್ತೆಯಲ್ಲಿ ಕೆಲವು ಪುಡಾರಿಗಳು, ರೌಡಿಗಳು ಹಲ್ಲೆ ಮಾಡಲು ಹೋಗಿದ್ದರು ಎಂದು ಕಿಡಿಕಾರಿದರು.
ಹಲ್ಲೆಯಾಗಿದ್ದರೆ ಯಾರು ಕಾರಣ? ಯಾರು ಜವಾಬ್ದಾರಿ ವಹಿಸಿಕೊಳ್ಳುತ್ತಿದ್ದರು? ಪೊಲೀಸರದ್ದು ಅತಿರೇಕದ ವರ್ತನೆ. ಸರ್ಕಾರದ ಕುಮ್ಮಕ್ಕಿನಿಂದ ನಡೆದಿದೆ. ಇದು ಪ್ರಜಾಪ್ರಭುತ್ವದ ಕಗ್ಗೋಲೆಯಾಗಿದೆ. ಇದರ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ಕೊಟ್ಟಿದ್ದೇವೆ ಎಂದರು.
PublicNext
20/12/2024 01:37 pm