ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಟ : ಸ್ವಂತ ಆಸ್ತಿಯಂತೆ ಪರಿಸರ ಸಂರಕ್ಷಿಸಿ - ಭೋಜ ಪೂಜಾರಿ

ಕೋಟ : ಪರಿಸರ ಸಂರಕ್ಷಿಸದಿದ್ದರೆ ಆಪತ್ತು ತಪ್ಪಿದಲ್ಲ ಎಂದು ಸಾಲಿಗ್ರಾಮ ಪಟ್ಟಣ ಪಂಚಾಯತ್ ಮಾಜಿ ಸದಸ್ಯ ಭೋಜ ಪೂಜಾರಿ ಹೇಳಿದರು. ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಣೂರು ಫ್ರೆಂಡ್ಸ್, ಹಂದಟ್ಟು ಮಹಿಳಾ ಬಳಗ ಕೋಟ, ಜೆಸಿಐ ಸಿನಿಯರ್ ಲಿಜನ್ ಕೋಟ ಇವರುಗಳ ಸಹಯೋಗದೊಂದಿಗೆ ಕೋಟ ಗ್ರಾಮ ಪಂಚಾಯತ್, ಎಸ್ ಎಲ್ ಆರ್ ಎಂ ಘಟಕದ ಸಂಯೋಜನೆಯೊಂದಿಗೆ ಕೋಟ ಗ್ರಾ.ಪಂ ಮೂಡುಗಿಳಿಯಾರು ಸಂಪರ್ಕಿಸುವ ರಸ್ತೆ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ರಸ್ತೆಗಳ ಇಕ್ಕೆಲಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಎಸೆಯುವ ಮನಸ್ಥಿತಿ ಬದಲಾಗಬೇಕಿದೆ. ಅದಕ್ಕಾಗಿ ಪ್ಲಾಸ್ಟಿಕ್ ಮುಕ್ತ ಸಮಾಜ ನಿರ್ಮಾಣಮಾಡಬೇಕು ಎಂದರು.

ಈ ಸಂದರ್ಭ ಸುಮಾರು ಅರ್ಧ ಕಿಮೀ ರಸ್ತೆಯಲ್ಲಿನ ಪ್ಲಾಸ್ಟಿಕ್ ತ್ಯಾಜ್ಯ ಹಾಗೂ ಬಾಟಲಿಗಳನ್ನು ತೆರವುಗೊಳಿಸಲಾಯಿತು.

ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಕಾರ್ಯದರ್ಶಿ ವಸಂತಿ ಹಂದಟ್ಟು, ಜೆಸಿಐ ಸಿನಿಯರ್ ಕೋಟ. ಇದರ ಅಧ್ಯಕ್ಷ ಕೇಶವ ಆಚಾರ್, ಮಣೂರು ಫ್ರೆಂಡ್ಸ್ ಮಾಜಿ ಅಧ್ಯಕ್ಷ ದಿನೇಶ್ ಆಚಾರ್ ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

20/12/2024 01:45 pm

Cinque Terre

386

Cinque Terre

0

ಸಂಬಂಧಿತ ಸುದ್ದಿ