ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವದೆಹಲಿ: ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಅಂದಾಗ ರಾಜ್ಯ ಸರ್ಕಾರ ಹಿಂಗೆ ಮಾಡಿದ್ರಾ ? ಸಿಟಿ ರವಿ ಬಂಧನಕ್ಕೆ ಬೊಮ್ಮಾಯಿ ಕಿಡಿ

ನವದೆಹಲಿ: ಸಿಟಿ ರವಿ ಬಂಧನದ ಕ್ರಮವನ್ನ ಸಂಸದ ಬಸವರಾಜ್ ಬೊಮ್ಮಾಯಿ ತೀವ್ರವಾಗಿ ಖಂಡಿಸಿದ್ದಾರೆ. ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಅಂದಾಗ ರಾಜ್ಯ ಸರ್ಕಾರ ಹಿಂಗೆ ಮಾಡಿದ್ರಾ ? ಎಫ್ ಎಸ್ ಎಲ್ ರಿಪೋರ್ಟ್ ಬಂದ ಬಳಿಕ ಕ್ರಮಕ್ಕೆ ಮುಂದಾಗಿತ್ತು ಎಂದು ಸರ್ಕಾರದ ನಡೆಯನ್ನ ಖಂಡಿಸಿದರು.

ಈ ಕುರಿತು ನವದೆಹಲಿ ಮಾತನಾಡಿದ ಅವರು, ಸಿ.ಟಿ.ರವಿಯವರು ಸದನದಲ್ಲಿ ಅವಾಚ್ಯವಾಗಿ ಹೇಳಿಕೆ ನೀಡಿದ್ದಾರೋ ಇಲ್ಲವೊ ಎಂಬುದರ ಸತ್ಯಶೋಧನೆ ಆಗಬೇಕು. ತನಿಖೆ ಆಗಬೇಕು ಎಂದು ಆಗ್ರಹಿಸಿದರು. ಪೊಲೀಸರ ನಡವಳಿಕೆಯನ್ನು ನಾವು ಸಮರ್ಥಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲ. ಕರ್ನಾಟಕದಲ್ಲಿ ಆಡಳಿತದ ಹಳಿ ತಪ್ಪಿದೆ. ಪೊಲೀಸ್ ರಾಜ್ಯ ನಡೆಯುತ್ತಿದೆ. ಪ್ರತಿಯೊಂದಕ್ಕೂ ಪೊಲೀಸ್ ದುರ್ಬಳಕೆ ಆಗುತ್ತಿದೆ. ವಿರೋಧ ಪಕ್ಷಗಳ ಮೇಲೆ ದ್ವೇಷ ಸಾಧಿಸಲು ಹಲವಾರು ಎಸ್ ಐಟಿ ರಚನೆ ಮಾಡಿ ಹಲವಾರು ತನಿಖೆ ಮಾಡುತ್ತಿದ್ದಾರೆ.

ಸ್ವತಃ ಮುಖ್ಯಮಂತ್ರಿಗಳೇ ಭ್ರಷ್ಟಾಚಾರದಲ್ಲಿ ಮುಳುಗಿದ್ದು ಅವರ ವಿರುದ್ಧವೇ ತನಿಖೆ ನಡೆಯುತ್ತಿದೆ.ಇಂತಹ ಸಂದರ್ಭದಲ್ಲಿ ಪೊಲೀಸ್ ವ್ಯವಸ್ಥೆ ದುರ್ಬಳಕೆ ವಿಧಾನಸೌಧದವರೆಗೂ ತಲುಪಿದೆ ಎಂದು ಆರೋಪಿಸಿದರು.ಬೆಳಗಾವಿ ಅಧಿವೇಶನದಲ್ಲಿ ಮೊದಲು ರೈತ ಸಮುದಾಯವಾಗಿರುವ ಪಂಚಮಸಾಲಿ ಸಮುದಾಯದ ಮೇಲೆ ಲಾಠಿ ಚಾರ್ಜ್ ಮಾಡಿ ರಕ್ತ ಸುರಿಸಿದರು. ಹಲವಾರು ಬಾರಿ ರೈತರು, ಇದೇ ಪಂಚಮಸಾಲಿ ಸಮುದಾಯದವರು ಪ್ರತಿಭಟನೆ ಮಾಡಿದಾಗಲೂ ಈ ರೀತಿ ನಡೆದಿರಲಿಲ್ಲ. ಒಂದು ರೀತಿಯಲ್ಲಿ ಪೊಲೀಸರ ದಬ್ಬಾಳಿಕೆಯಿಂದಲೇ ಎಲ್ಲವನ್ನು ಮಾಡಬಲ್ಲೆ ಎಂಬ ಅಭಿಪ್ರಾಯ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳಿಗೆ ಬಂದಂತಿದೆ. ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿಯವರ ಬಂಧನ ಸದನದೊಳಗೆ ಆಗಿರುವ ಘಟನೆಯ ಬಗ್ಗೆ ಸಭಾಪತಿಯವರು ನಿರ್ಣಯ ಮಾಡಬೇಕು ಎಂದು ಹೇಳಿದರು.

Edited By : Manjunath H D
PublicNext

PublicNext

20/12/2024 01:57 pm

Cinque Terre

43.27 K

Cinque Terre

4

ಸಂಬಂಧಿತ ಸುದ್ದಿ