ಹೊಸದುರ್ಗ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ದ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಅವರ ಹೇಳಿಕೆ ಶಾಸಕಾಂಗ ವ್ಯವಸ್ಥೆಗೆ ದೊಡ್ಡ ಅವಮಾನ. ಸಿ.ಟಿ ರವಿ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವೈಯಕ್ತಿಕ ವಿಚಾರವನ್ನು ಸಿ ಟಿ ರವಿ ಅವರು ಮಾತನಾಡಿರುವುದು ತಪ್ಪು ಇವತ್ತಿಗೂ ಕೂಡ ರಾಜಕೀಯಕ್ಕೆ ಹೆಣ್ಣು ಮಕ್ಕಳು ಬರಲು ಹಿಂದೇಟು ಹಾಕುತ್ತಿದ್ದಾರೆ ಹೀಗಿರುವಾಗ ಓರ್ವ ಜವಾಬ್ದಾರಿತ ಹೆಣ್ಣು ಮಗಳ ಬಗ್ಗೆ ಈ ರೀತಿ ಮಾತನಾಡಿರುವುದು ಖಂಡನೀಯ ಎಂದು ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಆಕ್ರೋಶ ವ್ಯಕ್ತಪಡಿಸಿದ್ದರು .
PublicNext
20/12/2024 02:30 pm