ಮಂಗಳೂರು : ಬಂಟ್ವಾಳ ತಾಲೂಕಿನ ಸಜಿಪ ಮುನ್ನೂರು ಮಂಜಲ್ಪಾದೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ
ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ತೃತೀಯ ವಾರ್ಷಿಕ ಮಹೋತ್ಸವ ಅಂಗವಾಗಿ ಗಣಹೋಮ, ಸತ್ಯನಾರಾಯಣ ಪೂಜೆ, ಕಲಶಾಭಿಷೇಕ ಸೇರಿದಂತೆ ದೇವರಿಗೆ ಕಾರ್ತಿಕ ಪೂಜೆ, ರಂಗಪೂಜೆ ವಿಜೃಂಭಣೆಯಿಂದ ನೆರವೇರಿತು.
ರಾತ್ರಿ ಅಯ್ಯಪ್ಪ ಸ್ವಾಮಿ ಭಕ್ತ ವೃಂದದಿಂದ ಸೇವಾ ರೂಪದಲ್ಲಿ ಭಗವತೀ ಯಕ್ಷಗಾನ ಮಂಡಳಿ ಸಸಿಹಿತ್ಲು ಮಂಗಳೂರು ಇವರಿಂದ ಭಗವತಿ ಮಹಾತ್ಮೆ ಯಕ್ಷಗಾನ ಬಯಲಾಟ ಜರಗಿತು. ದೇವರ ಈ ಕಾರ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡರು.
Kshetra Samachara
20/12/2024 02:33 pm