ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು : ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಡಿ.21, ಡಿ.23ರಂದು ದ.ಕ.ಜಿಲ್ಲಾ ಪ್ರವಾಸ

ಮಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಡಿಸೆಂಬರ್ 21 ಮತ್ತು 23ರಂದು ದ.ಕ.ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಡಿ.21ರಂದು ಬೆಳಗ್ಗೆ 10.15ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮನ, 10.45- ಬಂಟ್ವಾಳ ತಾಲೂಕಿನ ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಪ್ರೌಢಶಾಲೆಯಲ್ಲಿ ವಿಜ್ಞಾನ ಕೇಂದ್ರ ಉದ್ಘಾಟನೆ ಮತ್ತು ವಾರ್ಷಿಕೋತ್ಸವ, 11ಗಂಟೆಗೆ ಪಾಣೆಮಂಗಳೂರು ಬೊಂಡಾಲದಲ್ಲಿ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ ಉದ್ಘಾಟನೆ, 12ಗಂಟೆಗೆ ಪುತ್ತೂರು ಪುರಭವನದಲ್ಲಿ ಪುತ್ತೂರು ಉಪಕೇಂದ್ರ ಕಟ್ಟಡಗಳ ಶಂಕುಸ್ಥಾಪನೆ ಸಭಾ ಕಾರ್ಯಕ್ರಮ, ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ ಉದ್ಘಾಟನೆ ಸಭಾ ಕಾರ್ಯಕ್ರಮ, ಕಾರ್ಮಿಕ ಇಲಾಖೆಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ವಿವಿಧ ಟೂಲ್ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 1ಗಂಟೆಗೆ ಉಪ್ಪಿನಂಗಡಿಯಲ್ಲಿ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ ಉದ್ಘಾಟನೆ, 2.15ಕ್ಕೆ ಬೆಳ್ತಂಗಡಿ ತಾಲೂಕು ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡ ನಿರ್ಮಾಣ ಗುದ್ದಲಿ ಪೂಜೆ, 3.15ಕ್ಕೆ ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಬಿಪಿಎಚ್ ಲ್ಯಾಬ್ ಕಟ್ಟಡ ಉದ್ಘಾಟನೆ, ಸಂಜೆ 5ಕ್ಕೆ ಮಂಗಳೂರಿನಲ್ಲಿ ಕರಾವಳಿ ಉತ್ಸವ ಉದ್ಘಾಟನೆ, ಸಂಜೆ 6:10 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣದಿಂದ ಸಚಿವರು ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ.

ಡಿಸೆಂಬರ್ 23ರಂದು ಬೆಳಗ್ಗೆ 10:15ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮನ, 10:45ಕ್ಕೆ ಮಂಗಳೂರು ಬೀದಿಬದಿ ವ್ಯಾಪಾರಸ್ಥರ ವಲಯ ಉದ್ಘಾಟನೆ, 11ಕ್ಕೆ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ, ಮಧ್ಯಾಹ್ನ 1:30ಕ್ಕೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ, ಕಲ್ಯಾಣ ಮಂಟಪದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಅವರ ಪುತ್ರನ ವಿವಾಹ ಕಾರ್ಯಕ್ರಮ.

ಮಧ್ಯಾಹ್ನ 2ಕ್ಕೆ ಬೀಚ್ ಫೆಸ್ಟಿವಲ್ ಕರ್ಟನ್ ರೈಸಿಂಗ್ ಕಾರ್ಯಕ್ರಮ, 2:30ಕ್ಕೆ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ಮುಂದುವರಿಕೆ. ಸಂಜೆ 5.30ಕ್ಕೆ ತೊಕ್ಕೊಟ್ಟುವಿನಲ್ಲಿ ಶಾಸಕ ಐವನ್ ಡಿಸೋಜರ ಕ್ರಿಸ್ಮಸ್ ಮತ್ತು ಹೊಸವರ್ಷದ ಆಚರಣೆ ಕಾರ್ಯಕ್ರಮ, ಸಂಜೆ 6ಕ್ಕೆ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು.

Edited By : Nirmala Aralikatti
Kshetra Samachara

Kshetra Samachara

20/12/2024 02:51 pm

Cinque Terre

1.18 K

Cinque Terre

0

ಸಂಬಂಧಿತ ಸುದ್ದಿ