ಹಾಸನ : ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ ಅವಹೇಳನಕಾರಿ ಹೇಳಿಕೆ ಖಂಡಿಸಿ ನಗರದಲ್ಲಿ ವಿವಿಧ ಪ್ರಗತಿಪರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದರು.
ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಮೆರವಣಿಗೆ ಹೊರಟ ಪ್ರತಿಭಟನಕಾರರು ಪ್ರಮುಖ ರಸ್ತೆಗಳಲ್ಲಿ ಕೇಂದ್ರ ಸಚಿವ ಅಮಿತ್ ಶಾ ಅವರ ಪ್ರತಿಕೃತಿಯ ಶವಯಾತ್ರೆ ನಡೆಸುವ ಮೂಲಕ ತೀವ್ರ ಅಸಮಾಧಾನ ವ್ಯಕ್ತಪಡಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ದಸಂಸ ರಾಜ್ಯ ಸಂಘಟನಾ ಸಂಚಾಲಕ ಎಂ.ಸೋಮಶೇಖರ್ ಮಾತನಾಡಿ, ಅಧಿವೇಶನದಲ್ಲಿ ಕೇಂದ್ರದ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರದಲ್ಲಿ ಗೃಹ ಸಚಿವರಾಗಿರುವ ಅಮಿತ್ ಶಾ ಅವರು ಅಂಬೇಡ್ಕರ್ ಅವರ ಬಗ್ಗೆ ವ್ಯಂಗ್ಯ ಹಾಗೂ ಅವಹೇಳನಕಾರಿ ಮಾತುಗಳನ್ನ ಆಡಿರುವುದು ಖಂಡನೀಯ ಎಂದರು.
ಪ್ರತಿಭಟನೆಯಲ್ಲಿ ಪ್ರಗತಿಪರ ಸಂಘಟನೆಗಳ ಮುಖಂಡರಾದ, ಈರೆಶ್ ಈರೇಹಳ್ಳಿ, ಕೃಷ್ಣಾದಾಸ್, ಧರ್ಮೇಶ್, ಪೃಥ್ವಿ, ರಾಜು, ಹರೀಶ್, ವಿಜಿಕುಮಾರ್, ಜಗದೀಶ್, ರಾಜಕೇಖರ್, ತೋಟೆಶ್, ಇತರರು ಇದ್ದರು
PublicNext
20/12/2024 03:07 pm