ಉಡುಪಿ: ವಿಧಾನಪರಿಷತ್ ಸದಸ್ಯ ಸಿಟಿ ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಬಿಜೆಪಿ ಪ್ರತಿಭಟನೆ ನಡೆಸಿತು. ಬಿಜೆಪಿ ಕಚೇರಿ ಮುಂಭಾಗದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸಿ.ಟಿ ರವಿ ಜನಪ್ರತಿನಿಧಿ ,ಅವರಿಗೆ ಯಾವುದೇ ಗೌರವ ನೀಡದೆ ಅಮಾನವೀಯವಾಗಿ ಪೊಲೀಸರು ನಡೆಸಿಕೊಂಡಿದ್ದಾರೆ. ಪೋಲಿಸ್ ಇಲಾಖೆಯನ್ನು ಕಾಂಗ್ರೆಸ್ ದುರುಪಯೋಗಪಡಿಸಿಕೊಳ್ಳುತ್ತಿದೆ. ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಸಿದರೆ ಅದರ ಸಾಕ್ಷಿಯನ್ನು ನೀಡಿ. ಒಂದೂ ದಾಖಲೆಗಳನ್ನು ನೀಡದೆ ಆರೋಪ ಮಾಡಬೇಡಿ ಎಂದು ಪ್ರತಿಭಟನೆಯಲ್ಲಿ ಒತ್ತಾಯಿಸಲಾಯಿತು.
PublicNext
20/12/2024 04:01 pm