ಹುಬ್ಬಳ್ಳಿ: ಕರ್ನಾಟಕ ಗೂಂಡಾ ರಾಜ್ಯ, ಪಾಕಿಸ್ತಾನ ಆಗಿದೆ ಎಂಬ ಆರ್. ಅಶೋಕ್ ಹೇಳಿಕೆ ವಿಚಾರ, ಪಾಕಿಸ್ತಾನಕ್ಕೆ ಹೋಗಿ ಕೇಕ್ ತಿಂದು ಬಂದವರು ಯಾರು..? ಮುಸಲ್ಮಾನ, ಪಾಕಿಸ್ತಾನ, ಅಫ್ಘಾನಿಸ್ತಾನ ಬಿಟ್ಟರೆ ಇವರಿಗೆ ಬೇರೇನು ಗೊತ್ತಿದೆ ಎಂದು ಆರ್. ಅಶೋಕ್ಗೆ ಸಚಿವ ಸಂತೋಷ್ ಲಾಡ್ ತಿರುಗೇಟು ಕೊಟ್ಟಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಆರ್.ಎಸ್.ಎಸ್. ಮತ್ತು ಬಿಜೆಪಿ ಯಾವ ಮಹಿಳೆ ಬಗ್ಗೆ ಗೌರವ ಇಟ್ಟಿದೆ..? ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಎಲ್ಲಿಗಾದರೂ ಜೊತೆಯಲ್ಲಿ ಕರೆದುಕೊಂಡು ಹೋಗಿದ್ದಾರಾ..? ಪಾರ್ಲಿಮೆಂಟ್ ನೂತನ ಕಟ್ಟಡಕ್ಕೆ ರಾಷ್ಟ್ರಪತಿಗಳನ್ನು ಏಕೆ ಕರೆದುಕೊಂಡು ಹೋಗಲಿಲ್ಲ..? ರಾಮ ಮಂದಿರ ಪೂಜೆ ಮಾಡೋಕೆ ಮೋದಿ ಅವರಿಗೆ ಹೇಗೆ ಬಿಟ್ಟರು..? ಅನುಕೂಲಕ್ಕೆ ತಕ್ಕಂತೆ ಬಿಜೆಪಿ ನಾಯಕರು ಮಾತನಾಡುತ್ತಾರೆ. ಬಿಜೆಪಿಯವರು ಯಾವತ್ತೂ ಮಹಿಳೆಯರ ಪರವಾಗಿಲ್ಲ ಎಂದು ಸಂತೋಷ್ ಲಾಡ್ ಹೇಳಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
20/12/2024 04:07 pm