ಬಂಗಾರಪೇಟೆ : ಲೋಕಸಭೆಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ರವರನ್ನು ಅವಮಾನಗೊಳಿಸಿರುವ ಕೇಂದ್ರದ ಗೃಹ ಸಚಿವ ಅಮಿತ್ ಶಾ ರನ್ನು ಈ ಕೂಡಲೇ ಸಚಿವ ಸಂಪುಟದಿಂದ ವಜಾ ಮಾಡಿ ಅವರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು ಎಂದು ದಲಿತ ಸಂಘರ್ಷ ಸಮಿತಿ ಹಿರಿಯ ಮುಖಂಡರಾದ ಹೂವರಸನಹಳ್ಳಿ ರಾಜಪ್ಪ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.
ಪಟ್ಟಣದ ಕೋಲಾರ ಮುಖ್ಯ ರಸ್ತೆಯಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿ, ಪ್ರಪಂಚದ ನೂರ ಮೂವತ್ತಕ್ಕೂ ಹೆಚ್ಚು ದೇಶಗಳಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ರವರ ಸ್ಮರಣೆ ಮತ್ತು ಆರಾಧನೆಗಳು ನಡೆಯುತ್ತಿರುವ ಸಂದರ್ಭದಲ್ಲಿ ಭಾರತ ದೇಶದ ದೀನ ದಲಿತ ದುರ್ಬಲರ ಆಶಾಕಿರಣವಾದ ಡಾ. ಬಿ.ಆರ್.ಅಂಬೇಡ್ಕರ್ ರವರಿಗೆ ಲೋಕಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ ಅವಮಾನ ಮಾಡಿರುವುದು ತೀವ್ರ ಖಂಡನೀಯ ಎಂದರು.
PublicNext
20/12/2024 04:52 pm