ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್: ಸಿ.ಟಿ ರವಿ ಮಧ್ಯಂತರ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಬೆಂಗಳೂರು: ವಿಧಾನ ಪರಿಷತ್‌ ಸದಸ್ಯ ಸಿ.ಟಿ ರವಿ ಮಧ್ಯಂತರ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.

ಸಚಿವೆ ಲಕ್ಷ್ಮೀಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದ ಬಳಸಿದ ಪ್ರಕರಣದಲ್ಲಿ ಬಂಧನಕ್ಕೊಳಪಟ್ಟಿರುವ ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಅವರ ಪ್ರಕರಣವನ್ನು ಬೆಳಗಾವಿ ಜೆಎಂಎಫ್‌ಸಿ ನ್ಯಾಯಾಲಯ ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿತ್ತು. ಇತ್ತ ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಸಿ.ಟಿ.ರವಿ ಪರ ವಕೀಲ ಶ್ರೀನಿವಾಸರಾವ್ ಅವರು ನ್ಯಾಯಾಲಯಕ್ಕೆ ಮೇಲನವಿ ಅರ್ಜಿ ಸಲ್ಲಿಸಿದರು.

ಈ ಸಂಬಂಧ ವಿಚಾರಣೆ ನಡೆಸಿದ ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯವು ಮಧ್ಯಂತರ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಿಕೆ ಮಾಡಿದೆ.

Edited By : Vijay Kumar
PublicNext

PublicNext

20/12/2024 05:11 pm

Cinque Terre

30.4 K

Cinque Terre

0

ಸಂಬಂಧಿತ ಸುದ್ದಿ