ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಿಜಿ ವೈದ್ಯಕೀಯ 2ನೇ ಸುತ್ತು : ಡಿಸೆಂಬರ್‌ 27ರೊಳಗೆ ಪ್ರವೇಶ

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ- 2024 ಕೋರ್ಸ್ ಪ್ರವೇಶಕ್ಕೆ ಸಂಬಂಧಿಸಿದಂತೆ ನಡೆದ ಎರಡನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶುಕ್ರವಾರ ಪ್ರಕಟಿಸಿದೆ.

ಒಟ್ಟು 2,405 ಸೀಟುಗಳನ್ನು ಹಂಚಿಕೆ ಮಾಡಲಾಗಿದೆ. ಸೀಟು ಹಂಚಿಕೆಯಾದವರು ಡಿಸೆಂಬರ್‌ 26ರೊಳಗೆ ಶುಲ್ಕ ಪಾವತಿಸಿ, ಡಿಸೆಂಬರ್‌ 27ರೊಳಗೆ ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಸೀಟು ಹಂಚಿಕೆಯಾದವರು ಕಡ್ಡಾಯವಾಗಿ ಪ್ರವೇಶ ಪಡೆಯಬೇಕು. ಒಂದು ವೇಳೆ ಸಿಕ್ಕಿರುವ ಸೀಟು ಇಷ್ಟ ಇಲ್ಲದಿದ್ದರೆ ₹1.5 ಲಕ್ಷ ದಂಡ ಕಟ್ಟಿ ಮೂಲ ದಾಖಲೆ ವಾಪಸ್ ಪಡೆಯಬಹುದು ಎಂದು ಹೇಳಿದರು.

ಒಟ್ಟು 4,651 ಮಂದಿಯ ಮೂಲ ದಾಖಲೆಗಳನ್ನು ಸ್ವೀಕರಿಸಿದ್ದು ಅಷ್ಟೂ ಮಂದಿಯನ್ನು ಸೀಟು ಹಂಚಿಕೆಗೆ ಪರಿಗಣಿಸಲಾಗಿದೆ. ಮೂಲ ದಾಖಲೆ ಸಲ್ಲಿಸದವರನ್ನು ಸೀಟು ಹಂಚಿಕೆಗೆ ಪರಿಗಣಿಸಿಲ್ಲ ಎಂದು ಅವರು ವಿವರಿಸಿದ್ದಾರೆ.

Edited By : Vijay Kumar
PublicNext

PublicNext

20/12/2024 05:41 pm

Cinque Terre

12.27 K

Cinque Terre

0

ಸಂಬಂಧಿತ ಸುದ್ದಿ