ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಸಾರ್ವಜನಿಕ ಶೌಚಾಲಯಗಳ ನಿರ್ಮಾಣಕ್ಕೆ ಸ್ಥಳ ಗುರುತಿಸಲು ಸೂಚನೆ

ಬೆಂಗಳೂರು: ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಾಣ ಮಾಡಲು ಸ್ಥಳ ಗುರುತಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರ.

ಮಹದೇವಪುರ ವಲಯ ವ್ಯಾಪ್ತಿಯಲ್ಲಿ “ಮುಖ್ಯ ಆಯುಕ್ತರ ನಡೆ ವಲಯದ ಕಡೆ”ಯಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದ ವೇಳೆ ಸಾರ್ವಜನಿಕರೊಬ್ಬರು, ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಕೆಲವೆಡೆ ಸಾರ್ವಜನಿಕ ಶೌಚಾಲಯವನ್ನು ನಿರ್ಮಾಣ ಮಾಡಿಕೊಡಲು ಮನವಿ ಮಾಡಿದರು.

ಅದಕ್ಕೆ ಮುಖ್ಯ ಆಯುಕ್ತರು ಪ್ರತಿಕ್ರಿಯಿಸಿ, ಪಾಲಿಕೆ ವ್ಯಾಪ್ತಿಯಲ್ಲಿ ಹೊಸದಾಗಿ 200 ಹೈಟೆಕ್ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಾಣ ಮಾಡಲು ಕ್ರಮವಹಿಸಲಾಗುತ್ತಿದೆ. ಈ ಸಂಬಂಧ ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಖಾಲಿ ಜಾಗ/ಸಾರ್ವಜನಿಕ ಸ್ಥಳಗಳನ್ನು ಗುರುತಿಸಬೇಕು. ಆ ಬಳಿಕ ಟೆಂಡರ್ ಕರೆದು ಕಾಲಮಿತಿಯೊಳಗಾಗಿ ಶೌಚಾಲಯಗಳನ್ನು ನಿರ್ಮಾಣ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೆ.ಆರ್ ಪುರ ವ್ಯಾಪ್ತಿಯ ಆರ್.ಎನ್ ಎಸ್ ಕಾಲೋನಿ, ಜೈಭುವನೇಶ್ವರಿ ಬಡಾವಣೆ, ಬನಶಂಕರಿ ಬಡಾವಣೆ ಸೇರಿದಂತೆ ಅಕ್ಕ-ಪಕ್ಕದ ಬಡಾವಣೆಗಳಲ್ಲಿ ಚರಂಡಿಗಳಿಂದ ರಸ್ತೆಗಳ ಮೇಲೆ ನೀರು ಹರಿಯುತ್ತಿದ್ದು, ಅದರಿಂದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೊಳ್ಳೆಗಳ ಕಾಟ ಹೆಚ್ಚಾಗಿದ್ದು, ಅದನ್ನು ನಿಯಂತ್ರಿಸಲು ಕೇಳಿದ್ದಕ್ಕೆ ಪ್ರತಿಕ್ರಿಯಿಸಿ, ವಲಯ ಆಯುಕ್ತರು ಹಾಗೂ ವಲಯ ಜಂಟಿ ಆಯುಕ್ತರು ಸ್ಥಳ ಪರಿಶೀಲನೆ ನಡೆಸಿ ಸೊಳ್ಳೆ ಉತ್ಪತ್ತಿ ತಾಣಗಳನ್ನು ಗುರುತಿಸಿ ಔಷಧಿ ಸಿಂಪಡಣೆ ಹಾಗೂ ಫಾಗಿಂಗ್ ಮಾಡಿ ಸೊಳ್ಳೆ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಲು ಆರೋಗ್ಯ ವೈದ್ಯಾಧಿಕಾರಿಗೆ ಸೂಚನೆ ನೀಡಿದರು.

ಕಳೆದ ಬಾರಿ ನಾಗರೀಕರಿಂದ ಬಂದಂತಹ ಬಹುತೇಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಇನ್ನು ಕೆಲ ಸಮಸ್ಯೆಗಳು ಲಾಂಗ್ ಟರ್ಮ್ ಸಮಸ್ಯೆಗಳಾಗಿದ್ದು, ಅವುಗಳನ್ನು ಕೂಡಾ ಶೀಘ್ರಗತಿಯಲ್ಲಿ ಪೂರ್ಣಗೊಳಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇಂದಿನ ನಡೆದ ಕಾರ್ಯಕ್ರಮದಲ್ಲಿ ನಾಗರೀಕರಿಂದ 35ಕ್ಕೂ ಹೆಚ್ಚು ದೂರುಗಳು ಬಂದಿದ್ದು, ಅವುಗಳನ್ನು ಕೂಡಾ ಶೀಘ್ರ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ಈ ವೇಳೆ ವಲಯ ಆಯುಕ್ತರಾದ ರಮೇಶ್, ವಲಯ ಜಂಟಿ ಆಯುಕ್ತರಾದ ಡಾ. ದಾಕ್ಷಾಯಿಣಿ, ಪ್ರಧಾನ ಅಭಿಯಂತರರಾದ ಪ್ರಹ್ಲಾದ್, ಉಪ ಆಯುಕ್ತರಾದ ಶಶಿ ಕುಮಾರ್, ಮುಖ್ಯ ಅಭಿಯಂತರರಾದ ಲೋಕೇಶ್, ಕಾರ್ಯಪಾಲಕ ಅಭಿಯಂತರರು, ಪಾಲಿಕೆ, ಜಲಮಂಡಳಿ, ಬೆಸ್ಕಾಂ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

Edited By : Vijay Kumar
Kshetra Samachara

Kshetra Samachara

20/12/2024 06:42 pm

Cinque Terre

254

Cinque Terre

0

ಸಂಬಂಧಿತ ಸುದ್ದಿ