ಕಾರವಾರ : ಕ್ರಿಸ್ ಮಸ್ ಹಬ್ಬದ ಪ್ರಯುಕ್ತ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವತಿಯಿಂದ 125 ಹೆಚ್ಚುವರಿ ವಿಶೇಷ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ.
ಹಬ್ಬದ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳುವುದರಿಂದ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಮತ್ತು ಬಾಗಲಕೋಟೆ ವಿಭಾಗಗಳಿಂದ ಸುಮಾರು 125 ಹೆಚ್ಚುವರಿ ವಿಶೇಷ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ. ಡಿ.21 ಶನಿವಾರ ಡಿ.22 ಭಾನುವಾರ ವಾರಾಂತ್ಯ ದಿನದಂದು ಹಾಗೂ ಡಿ.25 ರಂದು ಕ್ರಿಸ್ ಮಸ್ ಹಬ್ಬವಿರುವುದರಿಂದ ಬೆಂಗಳೂರು ಮತ್ತು ಇತರೇ ಪ್ರಮುಖ ಸ್ಥಳಗಳಿಂದ ಹೆಚ್ಚಿನ ಪ್ರಯಾಣಿಕರು ತಮ್ಮ ತಮ್ಮ ಊರುಗಳಿಗೆ ತೆರಳಲು ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುತ್ತದೆ.
ಬೆಂಗಳೂರಿನಿದ ರಾಜ್ಯ, ಅಂತರ ರಾಜ್ಯದ ವಿವಿಧ ಸ್ಥಳಗಳಿಗೆ ತೆರಳಲು ಡಿ.21, 22 ಹಾಗೂ ಡಿ.25 ರಂದು ಹೆಚ್ಚುವರಿ ವಿಶೇಷ ಸಾರಿಗೆ ಸೌಲಭ್ಯವನ್ನು ಕಲ್ಪಿಸಲಾಗಿದೆ. ಹಬ್ಬ ಮುಗಿದ ಮೇಲೆ ಡಿ.25 ಹಾಗೂ ಡಿ.26 ಮತ್ತು ನಂತರದ ದಿನಗಳಂದು ಪ್ರಮುಖ ಸ್ಥಳಗಳಿಂದ ಜನದಟ್ಟಣೆಗೆ ಅನುಗುಣವಾಗಿ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲಾಗುವುದು ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.
PublicNext
20/12/2024 08:12 pm