ಕೋಲಾರ : ಶಾಲೆಗಳಲ್ಲಿ ಶೈಕ್ಷಣಿಕ ಪ್ರಗತಿ ಹಾಗೂ ಸಾಮಾಜಿಕ ಜವಾಬ್ದಾರಿ ಶಿಕ್ಷಕರ ಆದ್ಯ ಕರ್ತವ್ಯ ಅದರಿಂದ ತಪ್ಪಿಸಿಕೊಳ್ಳಲಾಗದು ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ತಿಳಿಸಿದರು.
ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಿಕ್ಷಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರದಲ್ಲಿ ಜಿಲ್ಲಾಧಿಕಾರಿಗಳ ಕಛೇರಿ ಆಡಿಟೋರಿಯಂನಲ್ಲಿ ಆಯೋಜಿಸಲಾಗಿದ್ದ, ಜಿಲ್ಲೆಯ ವಿದ್ಯಾರ್ಥಿಗಳ ಎಸ್.ಎಸ್.ಎಲ್.ಸಿ ಪರೀಕ್ಷಾ ಪಲಿತಾಂಶ ಸುಧಾರಣೆ ಕುರಿತು ಕಾರ್ಯಾಗಾರ ಹಾಗೂ ಪರೀಕ್ಷಾ ಮಾರ್ಗದರ್ಶಿ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು,
ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಜಿಲ್ಲೆಯಲ್ಲಿ ಹಾಕಿಕೊಂಡಿರುವ ಯೋಜನೆಗಳಲ್ಲಿ ಮುಖ್ಯ ಶಿಕ್ಷಕರಿಗೆ ಕಾರ್ಯಾಗಾರವು ಒಂದು ಯೋಜನೆಯಾಗಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಇಂತಹ ವಿದ್ಯಾರ್ಥಿಗಳಿಗೆ ಉಪಯೋಗವಾಗುವ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ. ಅವುಗಳಲ್ಲಿ ವಿಷನ್ ಕೋಲಾರ, ಸ್ಪರ್ಧಾತ್ಮಕ ಪರೀಕ್ಷಗಳ ಕೈಪಿಡಿಗಳು, ಸಿಇಟಿ ಮತ್ತು ನೀಟ್ ಪುಸ್ತಕಗಳ ವಿತರಣೆ ಮುಂತಾದ ಕ್ರಮಗಳು ಮುಖ್ಯವಾದವು. ಅದೇ ನಿಟ್ಟಿನಲ್ಲಿ ಇಂದು ಎಸ್.ಎಸ್.ಎಲ್.ಸಿ ಮಾರ್ಗದರ್ಶಿ ಕೈದೀವಿಗೆ ಪುಸ್ತಕಗಳನ್ನು ವಿದ್ಯಾರ್ಥಿಗಳ ಕೈಗಿಡುತ್ತಿದೆ. ನೀಡಲಾದ ಪಠ್ಯಪರಿಕರಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು ಎಂದರು.
Kshetra Samachara
20/12/2024 08:39 pm