ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಡಿಸೆಂಬರ್ 24ರಂದು ಲೋಕಾಯುಕ್ತ ಜನಸಂಪರ್ಕ ಸಭೆ- ಸಾರ್ವಜನಿಕ ಅಹವಾಲು ಸ್ವೀಕಾರ

ಉಡುಪಿ: ಉಡುಪಿ ಲೋಕಾಯುಕ್ತ ವಿಭಾಗದ ವತಿಯಿಂದ ಜಿಲ್ಲಾ ಲೋಕಾಯುಕ್ತ ವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಮತ್ತು ಮಂಗಳೂರು ವಿಭಾಗದ ಪೊಲೀಸ್‌ ಅಧೀಕ್ಷಕರು ಡಿಸೆಂಬರ್ 24ರಂದು ಬೆಳಗ್ಗೆ 11ರಿಂದ ಅಪರಾಹ್ನ 1:30ರವರೆಗೆ ಕುಂದಾಪುರ ತಾಲೂಕು ಕಛೇರಿಯಲ್ಲಿ ಸಾರ್ವಜನಿಕ ಅಹವಾಲು ಮತ್ತು ಲೋಕಾಯುಕ್ತ ಜನಸಂಪರ್ಕ ಸಭೆ ನಡೆಸಲಿದ್ದಾರೆ.

ಉಳಿದ ದಿನಗಳಲ್ಲಿಯೂ ಸಹ ಸಾರ್ವಜನಿಕರು ಅಹವಾಲುಗಳಿದ್ದಲ್ಲಿ ಉಡುಪಿ ಲೋಕಾಯುಕ್ತ ಕಚೇರಿಯ ಪೊಲೀಸ್‌ ಉಪಾಧೀಕ್ಷಕರು ದೂ. ಸಂಖ್ಯೆ: 0820-2958881, ಮೊ.ನಂ: 9364062581, ಪೊಲೀಸ್ ನಿರೀಕ್ಷಕರು-ದೂ.ಸಂಖ್ಯೆ: 0820-2536661, .: 9364062695 , ನಿರೀಕ್ಷಕರು- ಮೊ.ನಂ: 9364062696 ಅಥವಾ ಅರ್ಜಿದಾರರು ನಮೂನೆ 1 ಮತ್ತು 2ನ್ನು ಭರ್ತಿ ಮಾಡಿ, ಅಫಿಡವಿಟ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಉಡುಪಿ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರ ಕಚೇರಿಗೆ ಅಥವಾ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್ ಅಂಬೇಡ್ಕರ್ ವೀಥಿ, ಬೆಂಗಳೂರು ಇಲ್ಲಿಗೆ ಸಲ್ಲಿಸಬಹುದು.

ಸರಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ ಹಾಗೂ ನೌಕರರ ವಿರುದ್ಧವೂ ಸಹ ಸಾರ್ವಜನಿಕರು ದೂರು ನೀಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Edited By : PublicNext Desk
Kshetra Samachara

Kshetra Samachara

20/12/2024 09:13 pm

Cinque Terre

104

Cinque Terre

0

ಸಂಬಂಧಿತ ಸುದ್ದಿ