ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಲ್ಯಾಪ್ ಟಾಪ್, ಮೊಬೈಲ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಸಾರಿಗೆ ಸಿಬ್ಬಂದಿ

ಹುಬ್ಬಳ್ಳಿ: ಎರಡು ಪ್ರತ್ಯೇಕ ಘಟನೆಗಳಲ್ಲಿ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಪ್ರಯಾಣಿಕರು ಬಿಟ್ಟು ಹೋಗಿದ್ದ ಅಂದಾಜು 70 ಸಾವಿರ ರೂಪಾಯಿ ಮೌಲ್ಯದ ಲ್ಯಾಪ್ ಟಾಪ್ ಮತ್ತು 15 ಸಾವಿರ ರೂಪಾಯಿ ಮೌಲ್ಯದ ಮೊಬೈಲ್‌ನ್ನು ವಾರಸುದಾರರಿಗೆ ಹಿಂದಿರುಗಿಸುವ ಮೂಲಕ ಸಾರಿಗೆ ಸಿಬ್ಬಂದಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಡಿಸೆಂಬರ್ 19ರಂದು ಗುರುವಾರ ಮುಳಬಾಗಿಲಿನಿಂದ ಹುಬ್ಬಳ್ಳಿಗೆ ಬಂದಿರುವ ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ, ಹಾವೇರಿ ಜಿಲ್ಲೆಯ ನಿವಾಸಿಯಾಗಿರುವ ಮೌನೇಶ್ ಮಾಯಾಚಾರಿ ಎಂಬವರು ಬೆಂಗಳೂರಿನಿಂದ ಹಾವೇರಿಗೆ ಪ್ರಯಾಣ ಮಾಡಿದ್ದಾರೆ. ಹಾವೇರಿಯಲ್ಲಿ ಇಳಿಯುವಾಗ ಲ್ಯಾಪ್ ಟಾಪ್ ಇದ್ದ ಬ್ಯಾಗನ್ನು ಬಸ್ಸಿನಲ್ಲಿಯೇ ಮರೆತು ಹೋಗಿದ್ದಾರೆ.

ಎರಡು ಗಂಟೆ ನಂತರ ನೆನಪಾಗಿ ಬಸ್ಸಿನ ಚಾಲಕರಾದ ಶ್ರೀರಾಮ ಮತ್ತು ನಿರ್ವಾಹಕರಾದ ಮಂಜುನಾಥ ರವರನ್ನು ಸಂಪರ್ಕಿಸಿದಾಗ ಲ್ಯಾಪ್‌ಟಾಪ್ ಹಾಗೂ ಬ್ಯಾಗು ಸುರಕ್ಷಿತವಾಗಿರುವುದು ತಿಳಿದು ಬಂದಿದೆ. ಹಿರಿಯ ಅಧಿಕಾರಿಗಳ ಸಮಕ್ಷಮದಲ್ಲಿ ಚಾಲಕ ಹಾಗೂ ನಿರ್ವಾಹಕರ ಮೂಲಕ ಲ್ಯಾಪ್ ಟಾಪ್ ಹಾಗೂ ಬ್ಯಾಗ್ ನ್ನು ವಾರಸುದಾರರಿಗೆ ಹಿಂದಿರುಗಿಸಿದ್ದಾರೆ.

ಇನ್ನೊಂದು ಪ್ರಕರಣದಲ್ಲಿ ಹುಬ್ಬಳ್ಳಿಯಿಂದ ವಿಜಯಪುರಕ್ಕೆ ಹೋಗುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ, ಹುಬ್ಬಳ್ಳಿಯಿಂದ ಕೆರೂರಿಗೆ ಪ್ರಯಾಣ ಮಾಡಿದ ಮಹಿಳಾ ಪ್ರಯಾಣಿಕರೊಬ್ಬರು ಮೊಬೈಲ್ ಫೋನ್ ನ್ನು ಕಳೆದುಕೊಂಡಿದ್ದು ಬಸ್ಸಿನ ಚಾಲಕರಾದ ಬಿ.ಜಿ. ವಿಟ್ಟಣ್ಣವರ ಹಾಗೂ ನಿರ್ವಾಹಕರಾದ ಹೇಮಾ ಮೊರಬ ರವರು ವಾರಸುದಾರರಿಗೆ ಹಿಂದಿರುಗಿಸಿದ್ದಾರೆ.

Edited By : Vinayak Patil
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

20/12/2024 09:53 pm

Cinque Terre

38.43 K

Cinque Terre

2

ಸಂಬಂಧಿತ ಸುದ್ದಿ