ಹಾವೇರಿ: ಡಿಸೆಂಬರ್ 25,26 ಮತ್ತು 27ರಂದು ಮೂರು ದಿನಗಳ ಕಾಲ ಗಾಂಧಿ ಭಾರತ ಕಾರ್ಯಕ್ರಮ ಬೆಳಗಾವಿಯಲ್ಲಿ ನಡೆಯಲಿದೆ. ಆ ಪ್ರಯುಕ್ತ ಬೆಳಗಾವಿ ನಗರದಲ್ಲಿ ಮೈಸೂರು ದಸರಾ ಮಾದರಿಯಲ್ಲಿ ವಿದ್ಯುತ್ ದೀಪಾಲಂಕಾರ ಮಾಡುತ್ತಿದ್ದೇವೆ ಎಂದು ಹುಬ್ಬಳ್ಳಿ ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ ತಿಳಿಸಿದ್ದಾರೆ.
ಹಾವೇರಿಯಲ್ಲಿ ಮಾತನಾಡಿದ ಅವರು, ವಿದ್ಯುತ್ ದೀಪಾಲಂಕಾರದ ಜವಾಬ್ದಾರಿ ಹೆಸ್ಕಾಂಗೆ ನೀಡಿದ್ದಾರೆ ಎಂದು ತಿಳಿಸಿದರು. ಕಾರ್ಯಕ್ರಮದಿಂದ ಬೆಳಗಾವಿಗೆ ಮೆರುಗು ತರುವ ಕೆಲಸವನ್ನು ಮಾಡುತ್ತಿದ್ದೇವೆ.
ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿಯಲ್ಲಿ ಮಹಾತ್ಮಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಅಧಿವೇಶನ ನಡೆದಿತ್ತು. ಅದರ ನೂರು ವರ್ಷದ ವರ್ಷಾಚರಣೆ ಮಾಡುತ್ತಿದ್ದೇವೆ. ಮೈಸೂರು ದಸರಾದಲ್ಲಿ ದೀಪಾಲಂಕಾರ ಮಾಡಿದವರೇ ಬಂದು ಬೆಳಗಾವಿಯಲ್ಲಿ ದೀಪಾಲಂಕಾರ ಮಾಡುತ್ತಿದ್ದಾರೆ ಎಂದು ಖಾದ್ರಿ ತಿಳಿಸಿದರು.
PublicNext
20/12/2024 09:53 pm