ಬೆಂಗಳೂರು: ಟೀಂ ಇಂಡಿಯಾದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ವಿರುದ್ಧ ಅರೆಸ್ಟ್ ವಾರಂಟ್ ಜಾರಿಯಾಗಿದೆ.
ಹೌದು. ಉದ್ಯೋಗಿಗಳಿಗೆ ಮತ್ತು ಸರ್ಕಾರಕ್ಕೆ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದ ವಾರೆಂಟ್ ಜಾರಿ ಮಾಡಲಾಗಿದೆ. ರಾಬಿನ್ ಉತ್ತಪ್ಪ ಸೆಂಚುರಿಸ್ ಲೈಫ್ ಸ್ಟೈಲ್ ಬ್ರಾಂಡ್ ಪ್ರೈವೆಟ್ ಲಿಮಿಟೆಡ್ ಎಂಬ ಖಾಸಗಿ ಕಂಪನಿ ನಡೆಸುತ್ತಿದ್ದರು. ಈ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಹಲವರ ಫಿಎಫ್ ಹಣ ಪಾವತಿಸದೇ ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ರಾಬಿನ್ ಉತ್ತಪ್ಪ ಸುಮಾರು 23 ಲಕ್ಷ ರೂಪಾಯಿ ವಂಚಿಸಿದ್ದಾರೆ ಎನ್ನಲಾಗಿದೆ.
ಬೆಂಗಳೂರಿನ ಪುಲಕೇಶಿ ನಗರ ಪೊಲೀಸರಿಗೆ ಪಿಎಫ್‌ಓ ರಿಜಿನಲ್ ಕಮಿಷನರ್ ಷಡಾಕ್ಷಿರಿ ಗೋಪಾಲ ರೆಡ್ಡಿ ಅವರು ಈ ಕುರಿತು ಪತ್ರ ಬರೆದಿರುವುದು ತಿಳಿದು ಬಂದಿದೆ. ಡಿಸೆಂಬರ್ ಮೊದಲ ವಾರದಲ್ಲಿ ಅರೆಸ್ಟ್ ವಾರೆಂಟ್ ಜಾರಿ ಮಾಡಲಾಗಿತ್ತು. ಉತ್ತಪ್ಪ ಪುಲಕೇಶಿ ನಗರದವರಾಗಿದ್ದರಿಂದ ಅರೆಸ್ಟ್ ವಾರೆಂಟ್ ಅನ್ನು ಪುಲಕೇಶಿ ನಗರ ಪೊಲೀಸ್ ಠಾಣೆಗೆ ರವಾನಿಸಲಾಗಿದೆ.
2022ರ ಸೆಪ್ಟೆಂಬರ್ನಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದ ರಾಬಿನ್ ಉತ್ತಪ್ಪ, ವೀಕ್ಷಕ ವಿವರಣೆಗಾರರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ರಾಬಿನ್ ಉತ್ತಪ್ಪ ಕಳೆದ ಒಂದು ವರ್ಷದಿಂದ ತನ್ನ ಕುಟುಂಬದೊಂದಿಗೆ ದುಬೈನಲ್ಲಿ ನೆಲೆಸಿದ್ದಾರೆ. ಇತ್ತೀಚೆಗೆ ಪಾಡ್‌ಕಾಸ್ಟ್‌ವೊಂದರಲ್ಲಿ ಮಾತನಾಡಿದ್ದ ಉತ್ತಪ್ಪ ಕುಟುಂಬ ಸಮೇತರಾಗಿ ದುಬೈನಲ್ಲಿ ನೆಲೆಸಿರುವುದಾಗಿ ಮಾಹಿತಿ ನೀಡಿದ್ರು.
ತಮ್ಮ ಮಕ್ಕಳು ಬೆಂಗಳೂರಿನ ಟ್ರಾಫಿಕ್‌ನಲ್ಲಿ ಕಷ್ಟಪಡಬಾರದು ಎಂದು ದುಬೈನಲ್ಲಿ ನೆಲೆಸಿದ್ದೇನೆ ಎಂದು ರಾಬಿನ್ ಉತ್ತಪ್ಪ ಪಾಡ್‌ಕಾಸ್ಟ್‌ನಲ್ಲಿ ಹೇಳಿದ್ದರು.
PublicNext
21/12/2024 08:47 am