ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಿರಿಯೂರು : ಸಚಿವರ ಸೂಚನೆ ಮೇರೆಗೆ ಓಬಳಾಪುರ, ಗಾಯತ್ರಿಪುರ ಗ್ರಾಮಗಳಿಗೆ ಬಸ್ ಸಂಚಾರ

ಹಿರಿಯೂರು: ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿಯ ಓಬಳಾಪುರ ಮತ್ತು ಗಾಯತ್ರಿಪುರ ಗ್ರಾಮಗಳ ವಿದ್ಯಾರ್ಥಿಗಳ ಓಡಾಟಕ್ಕೆ ಕೆಎಸ್‌ಆರ್‌ಟಿಸಿ ಬಸ್ ಸಂಚಾರವನ್ನು ಪುನಾರಂಭಿಸಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರ ಸೂಚನೆ ಮೇರೆಗೆ ರಸ್ತೆಯನ್ನು ದುರಸ್ತಿ ಮಾಡಿಸಿ, ಬಸ್‌ಗಳ ಓಡಾಟಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್ ತಿಳಿಸಿದರು.'ಸಚಿವರು ಕರೆ ಮಾಡಿ ಬಸ್ ಸಮಸ್ಯೆ ಸರಿಪಡಿಸುವಂತೆ ಸೂಚಿಸಿದರು. ಸಚಿವರ ಆಪ್ತ ಸಹಾಯಕ ಅಮೀರ್, ಗ್ಯಾರಂಟಿ ಯೋಜನೆಗಳ ತಾಲ್ಲೂಕು ಘಟಕದ ಅಧ್ಯಕ್ಷ ಸೂರಗೊಂಡನಹಳ್ಳಿ ಕೃಷ್ಣಮೂರ್ತಿ, ಕೆಡಿಪಿ ಸದಸ್ಯರಾದ ಗುರುಪ್ರಸಾದ್ ಹಾಗೂ ಮುರಳಿ ಅವರೊಂದಿಗೆ ಕೆಎಸ್‌ಆರ್‌ಟಿಸಿ ಅಧಿಕಾರಿಗಳನ್ನು ಸಂಪರ್ಕಿಸಲಾಯಿತು. ರಸ್ತೆ ಸಮಸ್ಯೆಯಿಂದ ಅಲ್ಲಿಗೆ ಬಸ್ ಹೋಗುತ್ತಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ತಕ್ಷಣವೇ ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಅವರನ್ನು ಸ್ಥಳಕ್ಕೆ ಕರೆದೊಯ್ದು, ರಸ್ತೆಗೆ ಅಡ್ಡಲಾಗಿ ಹಾಕಿದ್ದ ಜಲ್ಲಿ-ಮರಳಿನ ರಾಶಿಯನ್ನು ತೆಗೆಸಿ ಬಸ್ ಓಡಾಟಕ್ಕೆ ವ್ಯವಸ್ಥೆ ಮಾಡಿದ್ದೇವೆ' ಎಂದು ಖಾದಿ ರಮೇಶ್ ತಿಳಿಸಿದರು.

Edited By : PublicNext Desk
Kshetra Samachara

Kshetra Samachara

21/12/2024 09:18 am

Cinque Terre

1.44 K

Cinque Terre

0

ಸಂಬಂಧಿತ ಸುದ್ದಿ