ಚಿತ್ರದುರ್ಗ: ಖಾಸಗಿ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಹೊತ್ತಿ ಉರಿದಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಪಾರಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗುಯಿಲಾಳ್ ಟೋಲ್ ಬಳಿ ಜರುಗಿದೆ.
ದಾವಣಗೆರೆ ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ ತಗುಲಿದ್ದು, ಬಸ್ಸಿನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಿರುವ ಶಂಕೆ. ಕೂಡಲೇ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ ಅಗ್ನಿಶಾಮಕ ಸಿಬ್ಬಂದಿ. ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
PublicNext
21/12/2024 09:48 am