ಹುಬ್ಬಳ್ಳಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವುದನ್ನು ಖಂಡಿಸಿ ಹುಬ್ಬಳ್ಳಿಯ ಅಂಬೇಡ್ಕರ್ ಸರ್ಕಲ್‌ನಲ್ಲಿ ತಮಟೆ ಬಾರಿಸುತ್ತಾ ಕರ್ನಾಟಕ ದಲಿತ ವಿಮೋಚನಾ ಸಮಿತಿ ಪ್ರತಿಭಟನೆ ನಡೆಸಿತು. ಇದೇ ವೇಳೆ ಗೃಹ ಸಚಿವ ಸ್ಥಾನಕ್ಕೆ ಅಮಿತ್ ಶಾ ಅವರು ಕೂಡಲೇ ರಾಜೀನಾಮೆ ಕೊಡಬೇಕೆಂದು ಒತ್ತಾಯಿಸಿ ತಹಶೀಲ್ದಾರರ ಮೂಲಕ ರಾಷ್ಟ್ರಪತಿ ಅವರಿಗೆ ಮನವಿ ಸಲ್ಲಿಸಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
21/12/2024 11:19 am