ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಜೈಪುರ ಅಗ್ನಿದುರಂತದಲ್ಲಿ 13 ಮಂದಿ ಸಾವು: ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ ಪರಿಹಾರ ಘೋಷಿಸಿದ ಮೋದಿ

ಜೈಪುರ ಎಲ್‌ಪಿಜಿ ಟ್ಯಾಂಕರ್ ಬೆಂಕಿ ಅವಘಡದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರ ನೀಡುವುದಾಗಿ ಪ್ರಧಾನಿ ಮೋದಿ ಘೋಷಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಪ್ರಧಾನಿ ಮೋದಿ ಅವರು, "ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಪ್ರಾಣಹಾನಿಯಿಂದ ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲೆಂದು ದೇವರಲ್ಲಿ ಪ್ರಾರ್ಥಿಸುವೆ. ಪ್ರತಿ ಮೃತರ ಸಂಬಂಧಿಕರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ., ಗಾಯಗೊಂಡವರಿಗೆ 50,000 ರೂ.ಗಳನ್ನು ಪರಿಹಾರ ನೀಡಲಾಗುವುದು" ಎಂದು ತಿಳಿಸಿದ್ದಾರೆ.

Edited By : Vijay Kumar
PublicNext

PublicNext

21/12/2024 11:50 am

Cinque Terre

53.5 K

Cinque Terre

5

ಸಂಬಂಧಿತ ಸುದ್ದಿ