ಚಿತ್ರದುರ್ಗ: ಹೊಳಲ್ಕೆರೆ ನಗರದಲ್ಲಿ ನೂತರವಾಗಿ ನಿರ್ಮಿಸಿರುವ ವಿಕಾಸ ಸೌಧ ಕಟ್ಟಡ ಉದ್ಘಾಟನೆಯನ್ನು ಡಿಸೆಂಬರ್ 25ರಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗಡೆ ಅವರು ನೆರವೇರಿಸಲಿದ್ದಾರೆ ಎಂದು ಹೊಳಲ್ಕೆರೆ ಶಾಸಕ ಡಾ. ಎಂ ಚಂದ್ರಪ್ಪ ತಿಳಿಸಿದ್ದಾರೆ.
ಚಿತ್ರದುರ್ಗ ನಗರದ ಪತ್ರಿಕ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಡಾ. ವೀರೇಂದ್ರ ಹೆಗಡೆ ಅವರು ಹೊಳಲ್ಕೆರೆ ನಗರದಲ್ಲಿ ಧರ್ಮಸ್ಥಳ ಗ್ರಾಮೀಣ ಮತ್ತು ನಗರ ಅಭಿವೃದ್ಧಿ ಸಂಸ್ಥೆ ವತಿಯಿಂದ ನಿರ್ಮಿಸಿರುವ ಸುಮಾರು 3 ಕೋಟಿ 76 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಒಂದು ಕಾರ್ಯಕ್ರಮದಲ್ಲಿ ಮುಖ್ಯ ಗಣ್ಯ ವ್ಯಕ್ತಿಗಳು ಹಾಗೂ ಧರ್ಮಸ್ಥಳ ಸಂಘದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
PublicNext
21/12/2024 01:28 pm