ಗದಗ: ಮುಖ್ಯ ಶಿಕ್ಷಕಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ನವನಗರದಲ್ಲಿ ನಡೆದಿದೆ.
ಅನ್ನಪೂರ್ಣ ರಾಥೋಡ (55) ಕೊಲೆಯಾದ ಮುಖ್ಯ ಶಿಕ್ಷಕಿಯಾಗಿದ್ದಾರೆ. ಮನೆಯಲ್ಲಿದ್ದ ಮುಖ್ಯ ಶಿಕ್ಷಕಿಯ ತಲೆಗೆ ದುಷ್ಕರ್ಮಿಗಳು ರೊಟ್ಟಿ ಮಾಡುವ ಕಟ್ಟಿಗೆಯ ಕ್ವಾಮಣಗಿಯಿಂದ ಹೊಡೆದು ಭೀಕರ ಕೊಲೆ ಮಾಡಿದ್ದು, ಇದರಿಂದಾಗಿ ಕ್ವಾಮಣಗಿ ತುಂಡು ತುಂಡಾಗಿ ಬಿದ್ದಿದೆ.
ಗಜೇಂದ್ರಗಡ ತಾಲೂಕಿನ ಲಕ್ಕಲಕಟ್ಟಿ ಗ್ರಾಮದ ಮಾಧ್ಯಮಿಕ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿಯಾಗಿದ್ದ ಅನ್ನಪೂರ್ಣ ರಾಥೋಡ ಗ್ರಾಮದಲ್ಲಿ ಎಸ್ಡಿಎಮ್ಸಿ ಸಮಿತಿ ಕೆಲವರ ಜೊತೆಗೆ ಭಿನ್ನಾಪ್ರಾಯದ ಕಾರಣದಿಂದಾಗಿ ರೋಣ ಬಿಇಒ ಕಚೇರಿಗೆ ವರ್ಗಾವಣೆ ಮಾಡಿಸಿಕೊಂಡಿದ್ದರು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಕೊಲೆಗೆ ಇದು ಕೂಡ ಕಾರಣ ಎಂದು ಹೇಳಿದ್ದಾರೆ. ಸುದ್ದಿ ತಿಳಿದು ಗಜೇಂದ್ರಗಡ ನಿವಾಸಿಗಳು ಆತಂಕಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಗಜೇಂದ್ರಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
PublicNext
21/12/2024 01:55 pm