ಬೆಂಗಳೂರು: ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದೆ. ಕಾರಿನ ಮೇಲೆ ಕಂಟೇನರ್ ಲಾರಿ ಬಿದ್ದಿದ್ದರಿಂದ ಕಾರ್‌ನಲ್ಲಿದ್ದ 6 ಮಂದಿ ಸಂಪೂರ್ಣವಾಗಿ ಅಪ್ಪಚ್ಚಿಯಾಗಿ ಸಾವು ಕಂಡಿದ್ದಾರೆ. ಕಾರಿನ ಮೇಲೆ ಕಂಟೇನರ್ ಲಾರಿ ಬಿದ್ದಿದ್ದರಿಂದಲೇ ಈ ಸಾವು ಸಂಭವಿಸಿದೆ ಎನ್ನಲಾಗಿದೆ.
ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ನೆಲಮಂಗಲ ತಾಲೂಕಿನ ಟಿ.ಬೇಗೂರು ಬಳಿ ಘಟನೆ ನಡೆದಿದೆ. ವೇಗವಾಗಿ ಬಂದ ಲಾರಿಗಳ ನಡುವೆ ಅಪಘಾತವಾಗಿದೆ. ಇದರಿದಾಗಿ ತುಮಕೂರು ಬೆಂಗಳೂರು ರಸ್ತೆಯಲ್ಲಿ ಬಾರಿ ಟ್ರಾಫಿಕ್ ಜಾಮ್ ಆಗಿದೆ. ಸ್ಥಳಕ್ಕೆ ನೆಲಮಂಗಲ ಟ್ರಾಫಿಕ್ ಪೊಲೀಸರು ಆಗಮಿಸಿದ್ದು, ಕಂಟೇನರ್ ಲಾರಿ ಬಿದ್ದ ಪರಿಣಾಮವಾಗಿ ಕಾರಿನಲ್ಲಿರುವರ ರಕ್ಷಣೆ ಕಾರ್ಯ ನಡೆಯುತ್ತಿದೆ.
ಕಂಟೇನರ್ ಲಾರಿ ಬಿದ್ದ ರಭಸಕ್ಕೆ ಕಾರು ಸಂಪೂರ್ಣವಾಗಿ ಅಪ್ಪಚ್ಚಿಯಾಗಿದ್ದು, ಅದರಲ್ಲಿದ್ದ ದೇಹಗಳು ಕೂಡ ಛಿದ್ರವಾಗಿದೆ. KA 01 ND 1536 ಕಾರ್ ನಲ್ಲಿದ್ದ ಎಲ್ಲರೂ ಸಾವು ಕಂಡಿದ್ದಾರೆ. ಒಟ್ಟು ಆರು ಮಂದಿ ಸಾವು ಕಂಡಿದ್ದಾರೆ ಎಂದು ತಿಳಿಸಲಾಗಿದೆ.
2 ಕಾರು, 2 ಲಾರಿ, ಶಾಲಾ ವಾಹನದ ನಡುವೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಡಿಕ್ಕಿ ರಭಸಕ್ಕೆ ಪಲ್ಟಿಯಾಗಿ ಕಾರಿನ ಮೇಲೆ ಕಂಟೇನರ್ ಬಿದ್ದಿದ್ದರಿಂದ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು, ಇಬ್ಬರು ಪುರುಷರು, ಮಗು ಸೆರಿ ಒಟ್ಟು 6 ಮಂದಿ ಸ್ಥಳದಲ್ಲೇ ಸಾವು ಕಂಡಿದ್ದಾರೆ.
PublicNext
21/12/2024 02:03 pm