ಬೆಂಗಳೂರು: ರಾಜ್ಯ ಮಹಿಳಾ ಆಯೋಗದಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಪತ್ರ ಬರೆದಿದ್ದಾರೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಸಿಟಿ ರವಿ ಅಶ್ಲೀಲ ಪದ ಬಳಕೆ ಆರೋಪ ಸಂಬಂಧ ಉನ್ನತ ಮಟ್ಟದ ತನಿಖೆಗೆ ಕೋರಿ ಪತ್ರ ಬರೆಯಲಾಗಿದೆ.
ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಪರಿಷತ್ ಸದಸ್ಯ ಸಿಟಿ ರವಿ ಅವಾಚ್ಯ ಶಬ್ದ ಹಾಗೂ ಅಸಂವಿಧಾನಿಕ ಪದ ಬಳಕೆ ಮಾಡಿ ಅಪಮಾನಿಸಿರುವ ಘಟನೆ ವರದಿ ಆಗಿದೆ. ಈ ಹಿನ್ನಲೆ ಈ ಕುರಿತು ಉನ್ನತ ಮಟ್ಟದ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿಗೆ ಪತ್ರ ಬರೆಯಲಾಗಿದೆ.
PublicNext
21/12/2024 02:03 pm