ಹಿರಿಯೂರು: ನಮ್ಮ ದೇಶದ ಸಂವಿಧಾನವು ಸಾರ್ವಜನಿಕರ ಸುರಕ್ಷತೆಗಾಗಿ ಮೂಲಭೂತ ಹಕ್ಕುಗಳನ್ನು ನೀಡಿದ್ದು, ಸಮಾಜದ ಪ್ರತಿಯೊಬ್ಬರೂ ಜೀವಿಸುವ ಹಕ್ಕಿನ ಜೊತೆಗೆ ಜೀವನ ನಿರ್ವಹಣೆಗಾಗಿ ಶಿಕ್ಷಣದ ಹಕ್ಕು, ಸಹ ಕೊಟ್ಟಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂಬುದಾಗಿ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ. ಹಾಗೂ ಸದಸ್ಯ ಕಾರ್ಯದರ್ಶಿ ಕಾನೂನು ಸೇವಾ ಸಮಿತಿ ಶಿಲ್ಪಾ ತಿಮ್ಮಾಪುರ ಹೇಳಿದರು.
ನಗರದ ಆಂಜನೇಯ ದೇವಸ್ಥಾನ ಹತ್ತಿರದ ಸರ್ಕಾರಿ ಸಾರ್ವಜನಿಕ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಬಾಲ್ಯವಿವಾಹ ಮುಕ್ತ ಭಾರತ, ವಿಶ್ವ ಏಡ್ಸ್ ದಿನ ಮತ್ತು ಮಾನವ ಹಕ್ಕುಗಳ ದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಏಡ್ಸ್ ಸಾಂಕ್ರಾಮಿಕ ರೋಗವಲ್ಲ, ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಅನೇಕ ಕ್ರಮಗಳನ್ನು ಕೈಗೊಂಡಿದೆ, ಇದರ ಜೊತೆಗೆ ಬಾಲ್ಯ ವಿವಾಹ ಎಂಬ ಅನಿಷ್ಠ ಪದ್ಧತಿ ಮನುಕುಲಕ್ಕೆ ಅಂಟಿದ ಶಾಪ ಈ ವಿಷಯಗಳ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸುವುದು ಅವಶ್ಯಕವಾಗಿದೆ ಎಂಬುದಾಗಿ ಅವರು ಹೇಳಿದರು.
Kshetra Samachara
21/12/2024 02:26 pm